ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಮಲೆನಾಡಿನ ಹಚ್ಚಹಸಿರು ಪರಿಸರ, ಕಾಜಾಣ, ಕವಿಶೈಲ, ಬಂಡೆ ಕಲ್ಲಿನ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್ ಎಂದು ಬರೆಯಲಾಗಿದೆ.

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11, 1994), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ:-
ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್‌ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಜ್ಞಾನಪೀಠ, ರಾಜ್ಯ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಭೂಷಣ, ಪಂಪ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ