ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

2239

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.

  • ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.

  • ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

  • ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ:-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ:- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರರಾಷ್ಟ್ರ ಗೀತೆ  ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…