ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

By admin

August 15, 2017

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು  ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.