ರಾಜಕೀಯ

ರಾಹುಲ್ ಗಾಂಧಿಯವರಿಗೆ ಯಾವಾಗ ಮದುವೆ ಎಂದು ಕೇಳಿದ್ದು ಯಾರು ಗೊತ್ತಾ…? ತಿಳಿಯಲು ಈ ಲೇಖನ ಓದಿ…

414

ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.

ದೆಹಲಿಯಲ್ಲಿ ಗುರುವಾರದಂದು ನಡೆದ 112ನೇ ವಾರ್ಷಿಕ ಅಧಿವೇಶನ ಹಾಗೂ ಪಿಹೆಚ್‍ಡಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಬಾಕ್ಸರ್ ವಿಜೇಂದರ್ ಸಿಂಗ್ ಎರಡು ಪ್ರಶ್ನೆಗಳನ್ನು ಕೇಳಿದ್ರು. ಮೊದಲನೆಯ ಪ್ರಶ್ನೆ ರಾಹುಲ್ ಗಾಂಧಿ ಯಾವಾಗ ಮದುವೆಯಾಗುತ್ತೀರಿ ಎಂದಾದರೆ ಇನ್ನೊಂದು ಪ್ರಶ್ನೆ ನೀವು ಪ್ರಧಾನಿಯಾದ್ರೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಏನು ಮಾಡ್ತೀರಿ ಅಂತ ಕೇಳಿದ್ರು.

ಮೊದಲು ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ಹಿಂದೇಟು ಹಾಕಿದ ರಾಹುಲ್, ಇದು ಹಳೇ ಪ್ರಶ್ನೆ. ಎಂದು ಉತ್ತರಿಸಲು ಹಿಂಜರಿದರು ಆಗಾಗ ಬರುತ್ತಲೇ ಇರುತ್ತೆ ಅಂದ್ರು. ಆದ್ರೆ ವಿಜೇಂದರ್ ಸಿಂಗ್ ಉತ್ತರಕ್ಕಾಗಿ ಒತ್ತಾಯಿಸಿದ್ರು. ಅಲ್ಲದೇ ನಾನು ಮತ್ತು ನನ್ನ ಪತ್ನಿ ನಿಮ್ಮ ಮದುವೆಯ ಬಗ್ಗೆ ಸದಾ ಮಾತನಾಡುತ್ತಿರುತ್ತೇವೆ ಅಂತೆಲ್ಲಾ ಹೇಳಿದ್ರು. ಈ ವೇಳೆ ರಾಹುಲ್ ಗೆ ಉತ್ತರಿಸದೆ ಬೇರೆ ದಾರಿಯೇ ಇರಲಿಲ್ಲ.

ಕೊನೆಗೆ `ನಾನು ವಿಧಿಯ ಮೇಲೆ ನಂಬಿಕೆ ಇಟ್ಟವನು. ನನ್ನ ಮದುವೆ ಯಾವಾಗ ಆಗಬೇಕೆಂದಿದಿಯೋ ಅಂದೇ ಆಗುತ್ತೆ’ ಅಂತ ಉತ್ತರಿಸಿದ್ರು.

ಕ್ರೀಡೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ತಾನು ಜಪಾನಿ ಮಾರ್ಷಲ್ ಆಟ್ರ್ಸ್ ಐಕಿಡೋನಲ್ಲಿ ಬ್ಲಾಕ್ ಬೆಲ್ಟ್ ಎಂದು ಹೇಳಿದ್ರು. ಈ ಬಗ್ಗೆ ಸಾರ್ವಜನಿಕವಾಗಿ ಎಲ್ಲೂ ಮಾತನಾಡಿಲ್ಲ. ಸಾಮಾನ್ಯವಾಗಿ ದಿನಕ್ಕೆ ಒಂದು ಗಂಟೆ ಕ್ರೀಡೆಯಲ್ಲಿ ಪಾಲ್ಗೊಳ್ತೀನಿ. ಇತ್ತೀಚೆಗೆ ಕೆಲವು ತಿಂಗಳಿನಿಂದ ಸಾಧ್ಯವಾಗಿಲ್ಲ ಅಂದ್ರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ