ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲೇ ಅತ್ಯಂತ ದೊಡ್ಡ ಮೆಟ್ರೋ ನಿಲ್ದಾಣ, ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿರುವ, ಮೆಜೆಸ್ಟಿಕ್ನ ‘ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ.
ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿದ್ದು, ಪ್ರಯಾಣಿಕರಿಗೆ ಆಸನ ವ್ಯವಸ್ಥೆ, ಮಾರ್ಗಸೂಚಿ ಫಲಕಗಳನ್ನು ಅಳವಡಿಸುವ ಸಣ್ಣಪುಟ್ಟ ಕೆಲಸಗಳು ಮಾತ್ರ ಬಾಕಿ ಇದ್ದು ಸ್ವಲ್ಪ ದಿನಗಳಲ್ಲೇ ಪೂರ್ಣಗೊಳ್ಳಲಿದೆ.
ಈ ನಿಲ್ದಾಣಕ್ಕೆ ಬರುವ ರೈಲುಗಳು ನಗರದ ನಾಲ್ಕೂ ದಿಕ್ಕಿನಿಂದ ಪ್ರಯಾಣಿಕರನ್ನು ಹೊತ್ತು ತರಲಿವೆ. ಉತ್ತರ–ದಕ್ಷಿಣ ಕಾರಿಡಾರ್ (ಯಲಚೇನಹಳ್ಳಿ– ನಾಗಸಂದ್ರ ಮಾರ್ಗ) ಹಾಗೂ ಪೂರ್ವ ಪಶ್ಚಿಮ ಕಾರಿಡಾರ್ (ಬೈಯಪ್ಪನಹಳ್ಳಿ– ಮೈಸೂರು ರಸ್ತೆ ಮಾರ್ಗ) ಪ್ರಯಾಣಿಕರು ಮಾರ್ಗ ಬದಲಾಯಿಸಲು ಈ ನಿಲ್ದಾಣವನ್ನು ಬಳಸಬಹುದು.
ಪ್ರಸ್ತುತ ಈ ನಿಲ್ದಾಣ ದಿನವೊಂದಕ್ಕೆ ಸರಾಸರಿ 39,000 ಪ್ರಯಾಣಿಕರನ್ನು ನಿರ್ವಹಣೆ ಮಾಡುತ್ತಿದೆ. ‘ನಮ್ಮ ಮೆಟ್ರೊ’ ಯೋಜನೆಯ ಮೊದಲ ಹಂತದ ಎಲ್ಲಾ ಮಾರ್ಗಗಳಲ್ಲೂ ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರ ಆರಂಭವಾದ ಬಳಿಕ ಇಲ್ಲಿ ಪ್ರಯಾಣಿಕರ ದಟ್ಟಣೆ ಮೂರು ಪಟ್ಟು ಹೆಚ್ಚಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೆಜೆಸ್ಟಿಕ್ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಕೇಂದ್ರ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುತ್ತದೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವೂ (ನಗರ ರೈಲು ನಿಲ್ದಾಣ) ಇಲ್ಲಿಂದ ಕೆಲವೇ ಮೀಟರ್ಗಳಷ್ಟು ದೂರದಲ್ಲಿದೆ. ಈ ನಿಲ್ದಾಣವನ್ನು ಬಳಸುವವರ ಪೈಕಿ ರಾಜಧಾನಿಯಿಂದ ಬೇರೆ ಊರುಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚು.

ಮೆಜೆಸ್ಟಿಕ್ನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ನಿಲ್ದಾಣವೂ ಮೆಟ್ರೊ ನಿಲ್ದಾಣದ ಪಕ್ಕದಲ್ಲೇ ಇದೆ. ಬಿಎಂಟಿಸಿ ಬಸ್ ಬಳಸಿ ನಗರದ ಬೇರೆ ಬೇರೆ ಪ್ರದೇಶಗಳಿಗೆ ತಲುಪುವವರೂ ಈ ನಿಲ್ದಾಣವನ್ನು ಬಳಸುತ್ತಾರೆ. ಹಾಗಾಗಿ ಉಳಿದ ಮೆಟ್ರೊ ನಿಲ್ದಾಣಗಳಿಗಿಂತ ಇಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚು ಇರುತ್ತದೆ.
ಈ ನಿಲ್ದಾಣ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ಈ ದಿನಗಳಿಗಾಗಿ ನಾವು ಕಾತರದಿಂದ ಕಾಯುತ್ತಿದ್ದೆವು. ನಗರಕ್ಕೆ ಪ್ರಮುಖ ಮೂಲಸೌಕರ್ಯವನ್ನು ನಿರ್ಮಿಸುವಲ್ಲಿ ಕಾರ್ಯನಿರ್ವಹಿಸಿದ ಹೆಮ್ಮೆ ನಮ್ಮದು’ ಎಂದು ಅಧಿಕಾರಿಗಳು ತಮ್ಮ ಖುಷಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.