ಸುದ್ದಿ

ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

30

ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ.

ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ.

ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ, ಪಶುಸಂಗೋಪನೆಸಚಿವ ಪ್ರಭು ಚೌಹಾಣ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿತವಾದಾಗ ಬೆಲೆಗಳ ಸ್ಥಿರೀಕರಣಕ್ಕಾಗಿ ಬೆಂಬಲಬೆಲೆ ನಿಗದಿಪಡಿಸುವ ಕುರಿತು ಪರಿಶೀಲಿಸಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ. ರೈತರು ಬೆಳೆದಉತ್ಪನ್ನಗಳ ಬೆಲೆ ಇಳಿಕೆಯಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶಿಸಿಬೆಲೆ ನಿಗದಿಪಡಿಸಲು ಸಂಪುಟ ಉಪಸಮಿತಿ ನೆರವಾಗಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ