ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

By admin

June 21, 2017

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.