ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.
ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.