ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ.
ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವಿಷಯವನ್ನು ರೈಲ್ವೇ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡ ಕೂಡಲೇ ರೈಲ್ವೆ ಅಧಿಕಾರಿಗಳು ಕೂಡಲೇ ಪ್ಲಾಟ್ಫಾರಂನಲ್ಲಿರುವ ಚಿಕಿತ್ಸಾಲಯಕ್ಕೆ ಕರೆತಂದರು. ಅರ್ಧ ಗಂಟೆಯಲ್ಲಿ ಸುಸೂತ್ರವಾಗಿ ಹೆರಿಗೆಯಾಗಿ, ತಾಯಿ ಹಾಗೂ ಗಂಡು ಮಗು ಆರೋಗ್ಯವಾಗಿದ್ದಾರೆ.ಹೆಚ್ಚುವರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.
ಥಾಣೆ ರೈಲ್ವೇ ನಿಲ್ದಾಣದಲ್ಲಿರುವ 1 ರೂ. ಕ್ಲಿನಿಕ್ ಅನ್ನು ಖಾಸಗಿಯವರು ನಡೆಸುತ್ತಿದ್ದಾರೆ. ಈ ಕ್ಲಿನಿಕ್ನಲ್ಲಿ ಇದುವರೆಗೂ 10 ಮಂದಿಗೆ ಹೆರಿಗೆ ಮಾಡಿಸಲಾಗಿದೆ. ರೈಲ್ವೇ ನಿಲ್ದಾಣದಲ್ಲಿರುವ ಒಂದು ರೂಪಾಯಿ ಆಸ್ಪತ್ರೆಗೆ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ರೈಲ್ವೆ ನಿಲ್ದಾಣದಲ್ಲಿ ತುರ್ತು ಚಿಕಿತ್ಸೆಗಾಗಿ ಈ ಒಂದು ರೂಪಾಯಿ ಚಿಕಿತ್ಸಾಲಯವನ್ನು ತೆರೆಯಲಾಯಿತು. ಇದರ ಮೂಲ ಅಗತ್ಯ ಸೇವೆ ಒದಗಿಸಲು ನಮಗೆ ಅವಕಾಶ ನೀಡಿದ ರೈಲ್ವೆ ಅಧಿಕಾರಿಗಳಿಗೆ ಧನ್ಯವಾದ. ಈ ಹೆರಿಗೆಯ ಮೂಲಕ ಒಂದು ರೂಪಾಯಿ ಚಿಕಿತ್ಸಾಲಯದ ಮಹತ್ವ ಹಾಗೂ ರೈಲು ನಿಲ್ದಾಣದಲ್ಲಿ ಇಂತಹ ಚಿಕಿತ್ಸಾಲಯದ ಅಗತ್ಯವಿದೆ ಎಂಬುದು ಸಾಬೀತಾಗಿದೆ ಎಂದು ಡಾ ಗುಳೆ ಹೇಳಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…