ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ.
ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು.
ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ ಜೀವನವು ಒತ್ತಡದಿಂದ ಕೂಡಿದೆ. ಎಲ್ಲರೂ ಯಂತ್ರಗಳAತೆ ಕೆಲಸ ಮಾಡುತ್ತಿದ್ದಾರೆ. ಇದರ ಫಲವಾಗಿ ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗದಂತಹ ಅನೇಕ ಅನಾರೋಗ್ಯಗಳನ್ನು ಅನುಭವಿಸುವಂತಾಗಿದೆ. ಇದಕ್ಕೆ ಪರಿಹಾರವೆಂದರೆ ದಿನದಲ್ಲಿ ಸ್ವಲ್ಪ ಸಮಯವಾದರೂ ಯೋಗಾಭ್ಯಾಸಕ್ಕೆ ಮೀಸಲಿಡಬೇಕು ಎಂದರು.
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ಆತ್ಮವಿಶ್ವಾಸದಿಂದ ಉತ್ತಮವಾದ ವ್ಯಕ್ತಿತ್ವವೂ ರೂಪುಗೊಳ್ಳುತ್ತದೆ. ಪ್ರಾಣಾಯಾಮವನ್ನು ಮಾಡುವುದರಿಂದ ಏಕಾಗ್ರತೆ ಉಂಟಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರವಚನಕಾರ ತಳಗವಾರ ಟಿ.ಎಲ್.ಆನಂದ್ ರವರು ಮಾತನಾಡಿ ಕೈವಾರ ತಾತಯ್ಯನವರು ಯೋಗಸಾಧಕರು. ಯೋಗ ಸಾಧನೆಯ ಮಹತ್ವ ಹಾಗೂ ವಿವರಗಳನ್ನು ತಾತಯ್ಯನವರು ಕೀರ್ತನೆ, ಶತಕಗಳ ಮೂಲಕ ತಿಳಿಸಿಕೊಟ್ಟಿದ್ದಾರೆ. ಉತ್ತಮ ಯೋಗ ಸಾಧಕರಾಗಲೂ ಕೈವಾರ ತಾತಯ್ಯನವರ ಯೋಗಸಾಧನ ವಿಧಾನವು ಸಹಕಾರಿಯಾಗಿದೆ. ಯೋಗಾಭ್ಯಾಸಿಗಳು ಇದರ ಅಧ್ಯಯನವನ್ನು ಮಾಡಬೇಕು ಎಂದು ಹೇಳುತ್ತಾ ಕೈವಾರ ಕ್ಷೇತ್ರದ ಮಹಿಮೆಯನ್ನು ತಿಳಿಸಿಕೊಟ್ಟರು.
ಬೆಂಗಳೂರಿನಿಂದ ಬಂದಿದ್ದ ಯೋಗಬಂಧುಗಳು ಶ್ರೀಕ್ಷೇತ್ರ ಕೈವಾರದಲ್ಲಿರುವ ಶ್ರೀಅಮರನಾರೇಯಣಸ್ವಾಮಿ, ಶ್ರೀ ಭೀಮಲಿಂಗೇಶ್ವರಸ್ವಾಮಿ ದೇವಾಲಯಗಳನ್ನು ದರ್ಶಿಸಿ, ಕೈವಾರ ಬೆಟ್ಟದ ಚಾರಣವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಸಾಮೂಹಿಕ ಪ್ರಾರ್ಥನೆ, ಭಜನೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀಯೋಗಿನಾರೇಯಣ ಮಠದ ಆಡಳಿತಾಧಿಕಾರಿ ಕೆ.ಲಕ್ಷಿ÷್ಮÃನಾರಾಯಣ, ಪತಂಜಲಿ ಯೋಗ ಸಮಿತಿಯ ಕಾರ್ಯದರ್ಶಿ ಸಾಗರ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.