ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ.
ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ.
ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ಪ್ರಕಾಶ್ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಬಂದು ಯೋಧನನ್ನು ಬಂಧಿಸಿದ್ದಾರೆ.ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.