ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಹಣ, ಸೈಟು ಇದ್ದರೂ, ಮರಳು ಅಭಾವದಿಂದ ಮನೆ ಕಟ್ಟಲು ಸಾಧ್ಯವಾಗ್ತಿರಲಿಲ್ಲ. ಲಕ್ಷಗಟ್ಟಲೇ ಹಣ ವ್ಯಯಿಸಬೇಕಿತ್ತು. ಇನ್ಮೇಲೆ ಚಿಂತೆ ಬಿಡಿ, ಚೀಲದಲ್ಲಿ ಸಿಗುತ್ತೆ ಬೇಕಾದಷ್ಟು ಮರಳು.
ಎಂ.ಎಸ್.ಐ.ಎಲ್. ಸಹಯೋಗದಲ್ಲಿ ಮಲೇಷ್ಯಾದಿಂದ ಮರಳು ತರಿಸಲಾಗಿದೆ. ಪ್ರತಿ ಟನ್ ಮರಳಿಗೆ 2300 ರೂ.ಗೆ ಮಾರಾಟ ಮಾಡಲು ಮಲೇಷ್ಯಾ ಕಂಪನಿ ಒಪ್ಪಿದ್ದು, ಕೃಷ್ಣಪಟ್ಟಣಂ ಬಂದರಿಗೆ 50 ಟನ್ ಮರಳು ಬಂದಿದೆ. ಮುಂದಿನವಾರದಿಂದ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತದೆ.
50 ಕೆ.ಜಿ. ಮರಳು ಚೀಲಕ್ಕೆ 190 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಪ್ಯಾಕಿಂಗ್ ಚಾರ್ಜ್, ಜಿ.ಎಸ್.ಟಿ. ಎಲ್ಲಾ ಸೇರಿದೆ. ವಾರ್ಷಿಕ 40 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಮಾಸಿಕ 3 ಲಕ್ಷದಂತೆ 36 ಲಕ್ಷ ಮೆಟ್ರಿಕ್ ಟನ್ ಮರಳು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಮರಳಿನ ಸಮಸ್ಯೆ ಕಡಿಮೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…