ಸುದ್ದಿ

ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

159

ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ.

ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಇತಿಹಾಸ ತಜ್ಞರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮೈಸೂರು ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಸಭೆ ನಡೆಸಿ ಜಯಚಾಮರಾಜೇಂದ್ರ ಒಡೆಯರ್ ಕುರಿತಂತೆ ಫಲಪುಷ್ಪ ಪ್ರದರ್ಶನ ಆಯೋಜಿಸುವ ಕುರಿತು ತೀರ್ಮಾನಿಸಲಾಗುತ್ತದೆ. ಅವರ ಕೊಡುಗೆಗಳ ಯಾವ ಅಂಶವನ್ನು ಪುಷ್ಪ ಪ್ರದರ್ಶನದಲ್ಲಿ ಅಳವಡಿಸಬೇಕು ಎಂಬುದರ ಬಗ್ಗೆಯೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

    ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…