ಸುದ್ದಿ

ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

By admin

July 15, 2019

ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ.

ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಇತಿಹಾಸ ತಜ್ಞರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮೈಸೂರು ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಸಭೆ ನಡೆಸಿ ಜಯಚಾಮರಾಜೇಂದ್ರ ಒಡೆಯರ್ ಕುರಿತಂತೆ ಫಲಪುಷ್ಪ ಪ್ರದರ್ಶನ ಆಯೋಜಿಸುವ ಕುರಿತು ತೀರ್ಮಾನಿಸಲಾಗುತ್ತದೆ. ಅವರ ಕೊಡುಗೆಗಳ ಯಾವ ಅಂಶವನ್ನು ಪುಷ್ಪ ಪ್ರದರ್ಶನದಲ್ಲಿ ಅಳವಡಿಸಬೇಕು ಎಂಬುದರ ಬಗ್ಗೆಯೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.