News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

60

ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್‍ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

    ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…