ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ ಮುಳುಗಡೆಯಾಗಿದೆ.. ಕುದುರೆಮುಖ,
ಕಳಸ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಸಂಪರ್ಕಿಸುವ ಹೆಬ್ಬಾಳ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ. ಕೆಲವೆಡೆ ಘಟ್ಟ ಪ್ರದೇಶಗಳಲ್ಲಿ ರಸ್ತೆಗಳೂ ಕೊಚ್ಚಿಹೋಗಿವೆಕೇವಲ ಚಿಕ್ಕಮಗಳೂರಷ್ಟೇ ಅಲ್ಲ, ಕೊಡಗು ಜಿಲ್ಲೆಯಲ್ಲೂ ಕಳೆದ ಮೂರು ದಿನಗಳಿಂದ ಮುಂಗಾರು ಬಿರುಸುಗೊಂಡಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸಂಭಾವ್ಯ ಅಪಾಯ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದ್ದು, ಇದರ ಜೊತೆ ಎನ್‌ಡಿಆರ್‌ಎಫ್ ತಂಡ ಕೂಡ ಅಪಾಯಕಾರಿ ಸ್ಥಳಗಳ ಮೇಲೆ ನಿಗಾ ಇಟ್ಟಿದೆ.
ಇನ್ನು ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಅದರ ಎಫೆಕ್ಟ್ ರಾಜ್ಯದ ಗಡಿ ಗ್ರಾಮಗಳಿಗೂ ತಟ್ಟಿದೆ. ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ಹಾಗೂ ದೂಧ್‌ಗಂಗಾ ನದಿಗಳು ತುಂಬಿ ಹರಿಯುತ್ತಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ 6 ಸೇತುವೆಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸವಾರರು ಪರದಾಡುವಂತಾಗಿದೆ.
ರಾಣೆಬೆನ್ನೂರು ತಾಲೂಕಿನ ಹೊಳೆಆನ್ವೇರಿ ಗ್ರಾಮದ ಬಳಿ ನಡುಗಡ್ಡೆಯಲ್ಲಿ 7 ಕುದುರೆಗಳು ಸಿಲುಕಿವೆ. ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ನಡುಗಡ್ಡೆಯಲ್ಲಿ ಸಿಲುಕಿಗೆ ಮೂಖ ಪ್ರಾಣಿಗಳು ಪರದಾಡುತ್ತಿದೆ. ಕಳೆದ 3 ದಿನಗಳಿಂದ ಆಹಾರವಿಲ್ಲದೆ ಕುದುರೆಗಳು ಕಂಗಾಲಾಗಿದ್ದು, ಮೂಖ ಪ್ರಾಣಿಗಳನ್ನು ರಕ್ಷಿಸುವಂತೆ ಸ್ಥಳೀಯರು ಅರಣ್ಯಾಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…