ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ. ಮೊದಲ ಹಾಗೂ 2ನೇ ಪತಿ ಜೊತೆ ಒಂದೇ ಮನೆಯಲ್ಲಿ ವಾಸವಾಗಿದ್ದಾಳೆ. ಮಹತ್ವದ ಉದ್ದೇಶದೊಂದಿಗೆ ಮಹಿಳೆ ಮಾಡಿದ ಈ ಕೆಲಸಕ್ಕೆ ಸಂಬಂಧಿಕರು ಬೇಷ್ ಎಂದಿದ್ದಾರೆ.
ಷಿ ಶಿಪ್ಪಿಂಗ್ ಪತಿ ಷು ಶಿಹಾನ್ ಗಣಿಯೊಂದರಲ್ಲಿ ಕೆಲಸ ಮಾಡ್ತಿದ್ದ. ದುರ್ಘಟನೆಯೊಂದರಲ್ಲಿ ಆತನಿಗೆ ಪಾರ್ಶ್ವವಾಯು ಕಾಣಿಸಿದೆ. ನಂತ್ರ ಷು ಶಿಹಾಗ್ ಹಾಸಿಗೆಯಲ್ಲಿಯೇ ಮಲಗುವಂತಾಗಿದೆ. ಘಟನೆ ನಂತ್ರ ಪತ್ನಿ ಶಿಹಾಗ್ ಸೇವೆ ಮಾಡ್ತಿದ್ದಳಂತೆ. ಆದ್ರೆ ಷುಗೆ ಪತ್ನಿ ಬಿಟ್ಟು ಹೋದರೆ ಎಂಬ ಭಯ ಕಾಡುತ್ತಿತ್ತಂತೆ. ಜೊತೆಗೆ ಪತ್ನಿ ಜೀವನ ಇಷ್ಟಕ್ಕೆ ಮುಗಿದು ಹೋದ್ರೆ ಎಂಬ ಚಿಂತೆ ಕಾಡುತ್ತಿತಂತೆ.
ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಷು ನನಗೆ ವಿಚ್ಛೇದನ ನೀಡಿ ಬೇರೆ ಮದುವೆ ಆಗುವಂತೆ ಷಿಗೆ ಹೇಳಿದ್ದ. ಅಂತೂ ಇಂತೂ ಷಿ ಇದಕ್ಕೆ ಒಪ್ಪಿದ್ದಳು. ಆದ್ರೆ ಒಂದು ಷರತ್ತು ವಿಧಿಸಿದಳು.ಮದುವೆ ನಂತ್ರವೂ ಮೊದಲ ಪತಿ ಸೇವೆ ಮಾಡುತ್ತೇನೆ ಎಂದು ಷಿ ಹೇಳಿದ್ದಳಂತೆ. ಇದಕ್ಕೆ ಷು ಆಪ್ತ ಸ್ನೇಹಿತ ಒಪ್ಪಿ ಷಿ ಕೈ ಹಿಡಿದನಂತೆ. ಈಗ ಎಲ್ಲರೂ ಒಟ್ಟಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ. ಪಿ ಮಾಜಿ ಪತಿ ಷು ಸೇವೆ ಮುಂದುವರೆಸಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.