ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.

ಬ್ರಿಟನ್ನ ವಿಜ್ಞಾನಿಗಳು ಜಗತ್ತಿಗೆ ಮೊದಲು ಕೋಳಿ ಬಂತು ಎನ್ನುತ್ತಾರೆ. ಅದಕ್ಕೆ ಅವರಿಗೆ ಪುರಾವೆ ಸಿಕ್ಕಿದೆಯಂತೆ. ಇಂಗ್ಲೆಂಡ್ ಶೆಫೀಲ್ಡ್ ಮತ್ತು ವಾರ್ವಿಕ್ ಯುನಿವರ್ಸಿಟಿಯ ಸಂಶೋಧಕರು ಅಧ್ಯಯನದ ಮೂಲಕ ಈ ತತ್ವವವನ್ನು ಕಂಡು ಹಿಡಿದಿದ್ದಾರೆ ಅಂತೆ.

ಅಂದರೆ ಮೊಟ್ಟೆಯ ಸಿಪ್ಪೆಯಲ್ಲಿ ಒಂದು ಖಾಸಾ ಪ್ರೊಟೀನಿದೆ. ಅದು ಕೋಳಿಯ ಅಂಡಾಶಯದಿಂದ ಹೊರಬರುತ್ತದೆ. ಅದ್ದರಿಂದ ಮೊದಲು ಕೋಳಿಯೇ ಬಂತು ಎನ್ನುತ್ತಾರೆ ವಿಜ್ಞಾನಿಗಳು. ಹೀಗೆ ಕೋಳಿ ಮೊಟ್ಟೆ ಇಟ್ಟಿದೆ.

ವಿಜ್ಞಾನಿಗಳಿಗೆ ಮೊದಲೇ ಗೊತ್ತಿತ್ತು. ವೊಕ್ಲೆಡಿಡಿನ್-17(ಒಸಿ-17) ಹೆಸರಿನ ಪ್ರೊಟೀನ್ ಮೊಟ್ಟೆ ರೂಪುಗೊಳ್ಳುವುದಕ್ಕೆ ಮುಖ್ಯ ಪಾತ್ರ ವಹಿಸುತ್ತದೆ. ಕ್ಯಾಲ್ಸಿಯಂ ಕಾರ್ಬೊನೆಟ್ ಜೊತೆ ಒಸಿ-17 ಸೇರಿಕೊಳ್ಳುತ್ತದೆ. ಹಾಗಾದರೆ ಕೋಳಿ ಹೇಗೆ ಹುಟ್ಟಿತು ಎನ್ನುವ ಪ್ರಶ್ನೆ ಸೃಷ್ಟಿಯಾಯಿತು. ವಿಜ್ಞಾನಿಗಳು ಮೊಟ್ಟೆ ಇಡುವ ಕೆಲವು ಜಾತಿಯ ಪಕ್ಷಿಗಳು ಕೋಳಿಗೆ ಜನ್ಮನೀಡಿತು ಎನ್ನುತ್ತಾರೆ.

ಈ ಸಂಶೋಧನೆಯಲ್ಲಿ ದೊಡ್ಡ ಯಶಸ್ಸು ಶೆಫೀಲ್ಡ್ ಯುನಿವರ್ಸಿಟಿ ಪ್ರೋಫೆಸರ್ ಜಾನ್ ಹಾರ್ಡಿಂಗ್ ಸಿಕ್ಕಿದೆ. ಅವರು ಹೇಳುತ್ತಾರೆ “ಹೇಗೆ ಮೊಟ್ಟೆ ಆಗುತ್ತದೆ ಎಂದು ತಿಳಿದುಕೊಳ್ಳಬೇಕಿತ್ತು.ನಿಜಕ್ಕೂ ಅದೊಂದು ಅಪೂರ್ವ ಅನುಭವಾಗಿದೆ. ಇದರಿಂದ ಇನ್ನೊಂದು ರಹಸ್ಯ ಬಹಿರಂಗವಾಯಿತು.

ಅದರಿಂದ ಹೊಸಡಿಸೈನ್ನ ವಸ್ತು ತಯಾರಿಸಲು ಉಪಯುಕ್ತವಾಗಲಿದೆ. ಪ್ರಾಕೃತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದರೆ ಎಲ್ಲರೀತಿಯ ಸಮಸ್ಯೆ ಕೊನೆಗೊಳ್ಳುತ್ತದೆ. ಅದರಿಂದ ನಾವು ಬಹಳಷ್ಟು ಕಲಿಯಬಹುದಾಗಿದೆ.”

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…