ಸುದ್ದಿ

ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

40

ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ.

ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.

ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೇರಿಸಿದರೆ, ಖಾಸಗಿ ಶಾಲೆಗಳು ಮಕ್ಕಳಿಗೆ ಉತ್ತಮ ವಿದ್ಯೆ ಕಲಿಸುವ ಬದಲಿಗೆ ವಿದ್ಯಾರ್ಥಿ ಗಳಿಂದ ನಾನಾ ಕೆಲಸಗಳನ್ನು ಮಾಡಿಸುವ ಮೂಲಕ ಬಾಲ ಕಾರ್ಮಿಕರನ್ನಾಗಿಸುವ ಕೆಲಸಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟ್ರ್ಯಾಕ್ಟರ್‌ಗೆ ಜಲ್ಲಿ ತುಂಬಿದ ಮಕ್ಕಳು:ಶಾಲೆ ಆವ ರಣದಲ್ಲಿರುವ ಜಲ್ಲಿ ಕಲ್ಲುಗಳನ್ನು ವಿದ್ಯಾರ್ಥಿಗಳಿಂದ ಟ್ರ್ಯಾಕ್ಟರ್‌ಗೆ ತುಂಬಿಸುವ ಕೆಲಸಕ್ಕೆ ಮುಂದಾಗುವ ಮೂಲಕ ಶಿಕ್ಷಣ ಇಲಾಖೆ ನಿಯಮಾವಳಿ ಗಳನ್ನು ಉಲ್ಲಂಘಿಸಿರುವ ಚೇಳೂರಿನ ಅರವಿಂದ ಖಾಸಗಿ ಶಾಲೆ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಕಟ್ಟಡ ನಿರ್ಮಾಣಕ್ಕೂ ಬಳಕೆ ಆರೋಪ:ಈ ಶಾಲೆಯಲ್ಲಿ ಹೊಸದಾಗಿ ಮೂರು ಕೊಠಡಿಗಳನ್ನು ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಅಗತ್ಯವಿರುವ ಜಲ್ಲಿ, ಇಟ್ಟಿಗೆ, ಮರಳು ಮುಂತಾದವುಗಳನ್ನು ಶಾಲೆ ಆವರಣದಲ್ಲಿ ಶೇಖರಣೆ ಮಾಡಲಾಗಿತ್ತು.

ಕಟ್ಟಡ ನಿರ್ಮಾಣದ ಕೆಲಸದಲ್ಲಿ ಶಾಲೆಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗು ತ್ತಿದೆಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ, ಶಿಕ್ಷಕರು ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…