ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು.

ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು.

ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ ಶಕ್ತಿ ದೇವತೆಗಳ ಪಟ ಪ್ರದರ್ಶನ ಮೆರವಣಿಗೆಯ ಆಕರ್ಷಣೆಯಾಗಿತ್ತು. ಗಾರುಡಿ ಬೊಂಬೆ ಇನ್ನಿತರ ಜಾನಪದ ಕಲಾ ತಂಡಗಳು ರಸ್ತೆಯುದ್ದಕ್ಕೂ ನೀಡಿದ ಪ್ರದರ್ಶನವನ್ನು ಜನತೆ ಕಣ್ತುಂಬಿಕೊಂಡರು.

ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ: ಛತ್ರಪತಿ ಶಿವಾಜಿ ವೇಷಧಾರಿ ಕುದುರೆ ಮೇಲೇರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಜನರನ್ನು ಆಕರ್ಷಿಸಿದರೆ, ಯುವಕರು ಗುಂಪು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು.ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಿದ ನಂತರ ಕೋಲಾರಮ್ಮ ಕೆರೆಯಲ್ಲಿ ನಿರ್ಮಿಸಿರುವ ಸಾಮೂಹಿಕ ಗಣೇಶ ವಿಸರ್ಜನಾ ಹೊಂಡದಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.
ಬಜರಂಗದಳ ಜಿಲ್ಲಾ ಸಂಚಾಲಕ ಬಾಬು, ನಗರಸಭಾ ಮಾಜಿ ಸದಸ್ಯರಾದ ಸೋಮಶೇಖರ್, ಮಂಜುನಾಥ್, ವಿಜಯಕುಮಾರ್, ಕೆಂಬೋಡಿ ನಾರಾಯಣಸ್ವಾಮಿ, ಮುನಿವೆಂಕಟಯಾದವ್, ಡಾ.ಶಿವಣ್ಣ ಇತರರು ಹಾಜರಿದ್ದರು.

ಬರಪೀಡಿತ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಬೇಡಿಕೆ ಮುಂದಿಟ್ಟುಕೊಂಡು ನಗರದಲ್ಲಿ 6ವರ್ಷಗಳಿಂದ ಅಖಂಡ ಭಾರತ ವಿನಾಯಕ ಮಹಾಸಭಾ ಗಣೇಶೋತ್ಸವವನ್ನು ಶಾಂತಿಯಿಂದ ಆಚರಿಸುತ್ತಿದೆ. ಜಿಲ್ಲೆಗೆ ನೀರಾವರಿ ಯೋಜನೆಗಳು ಮಂಜೂರಾಗಬೇಕು, ಅದು ಯರಗೋಳ್, ಎತ್ತಿನಹೊಳೆ, ಪರಮಶಿವಯ್ಯ ವರದಿ ಅಧಾರಿತ ಹೀಗೆ ಯಾವುದೇ ಮೂಲದಿಂದ ಆದರೂ ಶಾಶ್ವತ ನೀರಾವರಿ ಸೌಲಭ್ಯವನ್ನು ಸರ್ಕಾರ ಆದಷ್ಟು ಬೇಗ ಒದಗಿಸಬೇಕೆಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಓಂ ಶಕ್ತಿ ಚಲಪತಿ ಒತ್ತಾಯಿಸಿದರು.
ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯ ಸಿಗುವವರೆಗೂ ಗಣೇಶೋತ್ಸವ ಮುಂದುವರೆಯಲಿ. ಯುವಕರ ಒಗ್ಗಟ್ಟು ಪ್ರದರ್ಶನದ ಜತೆಗೆ ಶಾಂತಿ ಸೌಹಾರ್ದತೆ ಕಾಪಾಡುವ ರೀತಿಯಲ್ಲಿ ಮೆರವಣಿಗೆ ನಡೆಯಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…