ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಎರಡನೂರಕ್ಕೂ ಹೆಚ್ಚು ಎಪಿಸೋಡ್‌ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.
ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.
2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.
ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.
ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.
ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್‌ನ ಫೇಸ್ ಬುಕ್‌ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್‌ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.