ಉಪಯುಕ್ತ ಮಾಹಿತಿ

ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

By admin

March 16, 2018

ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು.

ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ ಲಿವರ್ ಬೇಗ ಕ್ರಿಯಾ ಹೀನವಾಗಬಹುದು.

ಏಳು ಬಗೆಯ ವೀಳ್ಯದೆಲೆಗಳನ್ನು ಆಯುರ್ವೇದದಲ್ಲಿ ಬಣ್ಣಿಸಲಾಗಿದೆ. ವೀಳ್ಯದೆಲೆಯಿಂದಾದ ಹೆಂಡವನ್ನು ಆಯುರ್ವೇದದಲ್ಲಿ ಕೆಲ ರೋಗಗಳಿಗೆ ಮದ್ದನ್ನಾಗಿ ಉಪಯೋಗಿಸಲು ಹೇಳಿದೆ.