ಸುದ್ದಿ

‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

64

ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ.

ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ.

ಈ ಮ್ಯಾರಥಾನ್ ನಲ್ಲಿ ಸ್ವತಃ ಗೋಲ್ಡನ್ ಸ್ಟಾರ್ ಗಣೇಶ ಪಾಲ್ಗೊಳ್ಳಲಿದ್ದಾರೆ. ವೃಷಭಾವತಿ ಅಭಿಯಾನಕ್ಕೆ ಕೈ ಜೋಡಿಸಿರುವ ಗಣೇಶ್ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಎಲ್ಲರೂ ಇಂತಹ ಪರಿಸರ ಉಳಿಸುವ ಅಭಿಯಾನಗಳ ಜೊತೆ ನಿಲ್ಲುವಂತೆ ಮನವಿ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿನಿಮಾಗಳಲ್ಲಿ ನಮ್ಮ ಸ್ಟಾರ್‌‍ಗಳು ಹಾಕಿಕೊಳ್ಳುವ ಬಟ್ಟೆಗಳನ್ನು ಸಿನಿಮಾ ಮುಗಿದ ಬಳಿಕ ಏನು ಮಾಡುತ್ತಾರೆಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸಿನಿಮಾಗಳಲ್ಲಿ ಸ್ಟಾರ್‌‍ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…