ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ.
ಈ ಮ್ಯಾರಥಾನ್ ನಲ್ಲಿ ಸ್ವತಃ ಗೋಲ್ಡನ್ ಸ್ಟಾರ್ ಗಣೇಶ ಪಾಲ್ಗೊಳ್ಳಲಿದ್ದಾರೆ. ವೃಷಭಾವತಿ ಅಭಿಯಾನಕ್ಕೆ ಕೈ ಜೋಡಿಸಿರುವ ಗಣೇಶ್ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಎಲ್ಲರೂ ಇಂತಹ ಪರಿಸರ ಉಳಿಸುವ ಅಭಿಯಾನಗಳ ಜೊತೆ ನಿಲ್ಲುವಂತೆ ಮನವಿ ಮಾಡಿದ್ದಾರೆ.