ಸುದ್ದಿ

ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

174

ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು.

ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿವೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಕಾರ್ ಪಾರ್ಕಿಂಗ್ ಗೇಟ್‌ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಕಾರ್ ಮಾಲಿಕರು ತಮ್ಮ ತಮ್ಮ ಕಾರ್ ಬಳಿ ಓಡಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರನ್ನು ಕಾರ್ ಬಳಿ ಬಿಟುತ್ತಿಲ್ಲವಾದ್ದರಿಂದ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ವಾಗ್ವಾದವೂ ಏರ್ಪಟ್ಟಿದೆ..

ಮೊದಲನೇ ಹಂತದ ವಿಮಾನ ಹಾರಾಟ ಮುಕ್ತಾಯಗೊಂಡಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಹುಲ್ಲಿಗೆ ಕೆಲ ಕಿಡಿಗೇಡಿಗಳು ಸಿಗರೇಟ್ ಹಾಕಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಯಲಹಂಕದ ಮೈದಾನದಲ್ಲಿ ದಟ್ಟಹೊಗೆ ಕಾಣಿಸಿಕೊಂಡಿದ್ದು, ಈಗಾಗಲೇ ಅಗ್ನಿಶಾಮಕದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…