inspirational

ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

61

ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ

ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇದೇ ವೇಳೆ, ಕುಟುಂಬದವರೊಂದಿಗೆ ಟ್ರಿಪ್ ಹೋಗಿದ್ದ ಮಾಲೀಕಯ್ಯ ಗುತ್ತೇದಾರ್ ಮತ್ತು ಆರ್​.ವಿ. ದೇಶಪಾಂಡೆ ಕೂಡ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅನರ್ಹ ಶಾಸಕರ ಜೊತೆ ಬಿಜೆಪಿ ನಾಯಕರಾದ ಆರ್​. ಅಶೋಕ್ ಮತ್ತು ಅಶ್ವತ್ಥನಾರಾಯಣ ಕೂಡ ಬಂದಿಳಿದಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಎಂಟಿಬಿ ನಾಗರಾಜ್, ನಾನು ಮುಂಬೈನಿಂದ ಒಬ್ಬನೇ ಬಂದೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆಯಿದೆ, ಹೋರಾಡ್ತೀನಿ. ಬಿಜೆಪಿಯ ಯಾವ ಶಾಸಕರೂ ನನ್ನನ್ನು ಸಂಪರ್ಕಿಸಿಲ್ಲ. ಸ್ಪೀಕರ್ ನೀಡಿರುವ ಆದೇಶದ ವಿರುದ್ಧ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ಉಳಿದ ಶಾಸಕರು ಮುಂಬೈನಲ್ಲೇ ಇದ್ದಾರೆ. ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಅತೃಪ್ತರಿಗೆ ಬಿಗ್ ಶಾಕ್; ಕಾಂಗ್ರೆಸ್​ನ 11, ಜೆಡಿಎಸ್​ನ 3 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್

ಕಳೆದ ವಾರ ಕಾಂಗ್ರೆಸ್​ನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ,  ಅಥಣಿಯ ಮಹೇಶ್ ಕುಮಟಹಳ್ಳಿ, ರಾಣೇಬೆನ್ನೂರು ಶಾಸಕ ಆರ್. ಶಂಕರ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ನಿನ್ನೆ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್, – ಯಶವಂತಪುರದ ಎಸ್.ಟಿ. ಸೋಮಶೇಖರ್, ಕೆ.ಆರ್​.ಪುರದ ಭೈರತಿ ಬಸವರಾಜು, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಆರ್​.ಆರ್​. ನಗರ ಶಾಸಕ ಮುನಿರತ್ನ, ಶಿವಾಜಿನಗರ ಶಾಸಕ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಡಾ. ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಮಹಾಲಕ್ಷ್ಮೀ ಲೇಔಟ್​ನ ಕೆ. ಗೋಪಾಲಯ್ಯ, ಕೆ.ಆರ್​. ಪೇಟೆಯ ನಾರಾಯಣಗೌಡ, ವಿಜಯನಗರದ ಆನಂದ್ ಸಿಂಗ್, ಹುಣಸೂರಿನ ಹೆಚ್. ವಿಶ್ವನಾಥ್, ಕಾಗೇವಾಡ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅನರ್ಹಗೊಳಿಸಿದ್ದಾರೆ. ಅಲ್ಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮೈತ್ರಿ ಪಕ್ಷದ ಎಲ್ಲ ಶಾಸಕರನ್ನೂ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸುವ ಮೂಲಕ ಶಾಕ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ