ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.
ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.