ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಮೀತ್ ಎನ್ನುವ ಶಿಕ್ಷಕಿ ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.
ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.
ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.
ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.
ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’
4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.
ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….