ವಿಶೇಷ ಲೇಖನ

ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

864

ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿದ್ದರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

ಶ್ರೀಗಳ ಬಾಲ್ಯ:-

ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ 1,1908ರಲ್ಲಿ 13 ನೇ ಮಗು ಶಿವಣ್ಣನವರಾಗಿ ಜನಿಸಿದರು. ಹೊನ್ನೆಗೌಡ ದಂಪತಿಗಳಿಗೆ ಎಂಟು ಜನ ಗಂಡು ಮಕ್ಕಳು ಹಾಗೂ ಐದು ಹೆಣ್ಣು ಮಕ್ಕಳು, ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ.

ಶ್ರೀಗಳ ಶಿಕ್ಷಣ :-

ವೀರಾಪುರದಲ್ಲಿಯೇ ಇದ್ದ ಕೂಲಿಮಠ ದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು. ಅನಂತರ ಪ್ರಾಥಮಿಕ ಶಾಲೆಗಾಗಿ ಪಕ್ಕದಲ್ಲಿಯೇ ಇರುವ ಪಾಲನಹಳ್ಳಿಯ ಶಾಲೆಗೆ ದಾಖಲಾದರು. ತಮ್ಮ ಶಾಲಾ ಪ್ರಾಥಮಿಕಾ ಶಾಲಾ ದಿನಗಳಲ್ಲಿಯೇ ತಾಯಿಯನ್ನು ಕಳೆದುಕೊಡ ಶಿವಣ್ಣ ಅನಂತರ ಬೆಳೆದಿದ್ದು ಅಕ್ಕನ ಆಸರೆಯಲ್ಲಿ. ತುಮಕೂರು ಬಳಿ ಇರುವ ನಾಗವಲ್ಲಿ ಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಶಿವಣ್ಣ 1922ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು 1926ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. 1927ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು.

ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆಸೇರಿದರು. ಬೆಂಗಳೂರಿನಲ್ಲಿ ‘ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮ ಛತ್ರ’ ದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಶಿವಣ್ಣನವರು ಶಿಸ್ತುಬದ್ಧವಾದ ಕಟ್ಟು ನಿಟ್ಟಾದ ವಿದ್ಯಾರ್ಥಿ ಜೀವನ ನಡೆಸಿದರು.ವಿದ್ಯಾಭ್ಯಾಸದೊಂದಿಗೆ ಸಿದ್ದಗಂಗಾ ಮಠದ ಒಡನಾಟವಂತೂ ಮುಂದುವರೆದೇ ಇತ್ತು. ಹಿರಿಯ ಗುರುಗಳಾದ ಶ್ರೀ ಉದ್ಧಾನ ಸ್ವಾಮಿಜಿಗಳ ಹಾಗು ಆಗ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರ ಸಂಗ ಶಿವಣ್ಣನವರಿಗೆ ಒಂದು ಹಿತಾನುಭೂತಿ ನೀಡುತ್ತಿತು. ಶಿವಣ್ಣನವರು ಎಲ್ಲ ಸಮಯಗಳಲ್ಲೂ ಮಠದ ಹಿತವನ್ನು ಬಯಸುತ್ತ ಮಠಕ್ಕೆ ಬಂದು ಹೋಗಿ ಮಾಡುತ್ತಿದ್ದರು, ಎಷ್ಟರ ಮಟ್ಟಿಗೆ ಎಂದರೆ ಇಡೀ ತುಮಕೂರು ಜಿಲ್ಲೆ ಒಮ್ಮೆ ಭೀಕರ ಪ್ಲೇಗ್ ರೋಗಕ್ಕೆ ತತ್ತರಿಸಿತು ಹಾಗಿದ್ದಾಗ್ಯೂ ಶಿವಣ್ಣನವರ ಹಾಗು ಮಠದ ಒಡನಾಟ ಎಂದಿನತೆಯೇ ಇತ್ತು.

ಶ್ರೀಗಳು ಮಠಾಧಿಪತಿಯಾಗಿದ್ದು ಹೀಗೆ…

ಶ್ರೀ ರಕ್ಷೆಯಿಂದ ಉತ್ತಮವಾಗಿ ನಡೆಯುತ್ತಿದ್ದ ಸಿದ್ದಗಂಗಾ ಮಠಕ್ಕೆ 1930ರಲ್ಲಿ ಬರ ಸಿಡಿಲು ಬಡಿದಂತಹ ಒಂದು ಘಟನೆ ನಡೆಯುತ್ತದೆ. ಅದೇನೆಂದರೆ ಉದ್ದಾನ ಶಿವಯೋಗಿಗಳ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರು ಆಕಸ್ಮಿಕವಾಗಿ ಶಿವೈಕ್ಯರಾಗುತ್ತಾರೆ. ಆಗ ಅವರ ಕ್ರಿಯಾ ಸಮಾಧಿ ಕಾರ್ಯಕ್ಕೆ ಆಗಮಿಸಿದ್ದ ಶಿವಣ್ಣನವರ ಕಡೆ ಉದ್ಧಾನ ಸ್ವಾಮಿಜಿಗಳ ದೃಷ್ಟಿ ಹರಿಯುತ್ತದೆ. ಅಷ್ಟರಲ್ಲಾಗಲೇ ಶಿವಣ್ಣನವರ ಹಿನ್ನೆಲೆಯ ಅರಿವಿದ್ದ ಉದ್ಧಾನ ಶ್ರೀಗಳು ಯಾರ ಹೇಳಿಕೆಗೂ ಕಾಯದೆ ಎಲ್ಲರ ಸಮ್ಮುಖದಲ್ಲಿ ಶಿವಣ್ಣನೇ ಈ ಮಠದ ಉತ್ತರಾಧಿಕಾರಿ ಎಂದು ಘೋಷಿಸಿ ಬಿಡುತ್ತಾರೆ.

ಎಲ್ಲರಂತೆ ಸಾಮಾನ್ಯರಾಗಿ ಕ್ರಿಯಾ ಸಮಾಧಿ ಕಾರ್ಯಕ್ಕೆ ಬಂದಿದ್ದ ಶಿವಣ್ಣನವರು ಹೋಗುವಾಗ ಕಾವಿ, ರುದ್ರಾಕ್ಷಿಗಳನ್ನು ಧರಿಸಿದ ಸನ್ಯಾಸಿಯಾಗಿ ‘ಶ್ರೀ ಶಿವಕುಮಾರ ಸ್ವಾಮಿಜಿ’ಗಳಾಗಿ ಹಿಂದಿರುಗುತ್ತಾರೆ. ಇದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗುತ್ತಾರೆ. ಸನ್ಯಾಸತ್ವ ಸ್ವೀಕಾರದ ನಂತರವೂ ವಿದ್ಯಾಭ್ಯಾಸ ಮುಂದುವರಿಸಿದ ಶಿವಣ್ಣನವರು ಮತ್ತೆ ಬೆಂಗಳೂರಿಗೆ ಬಂದು ಸನ್ಯಾಸತ್ವದ ರೀತಿ ರಿವಾಜುಗಳನ್ನು ಸಂಪ್ರದಾಯಬದ್ಧವಾಗಿ ಪಾಲಿಸುತ್ತಲೂ ಹಾಗು ಶಿಸ್ತುಬದ್ಧ ವಿದ್ಯಾರ್ಥಿಯಾಗಿಯೂ ತಮ್ಮ ಒಡನಾಡಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾರೆ.ವಿದ್ಯಾಭ್ಯಾಸ ಮುಗಿದು ಸ್ವಾಮಿಜಿಯವರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸಿದ್ದಗಂಗಾ ಮಠಕ್ಕೆ ಹಿಂದಿರುಗಿ, ಅಂದಿನಿಂದ ತಮ್ಮ ಪೂರ್ಣ ಸಮಯವನ್ನು ಮಠದ ಏಳಿಗೆಗಾಗಿ ಮೀಸಲಿಡುತ್ತಾರೆ. ಇದಾಗಿ ಮುಂದೆ ಶ್ರೀ ಉದ್ಧಾನ ಶಿವಯೋಗಿಗಳು ಶಿವೈಕ್ಯರಾದಾಗ ಮಠದ ಸಕಲ ಆಡಳಿತವೂ, ಮಠದ ವಿದ್ಯಾರ್ಥಿಗಳ, ಶಿಕ್ಷಣ ಸಂಸ್ಥೆಗಳ ಯೋಗ ಕ್ಷೇಮದ ಜವಾಬ್ದಾರಿಯೂ ಶ್ರೀಗಳವರಿಗೆ ಹಸ್ತಾಂತರವಾಗುತ್ತದೆ.

ಮಠಾಧಿಪತಿಯಾದ ನಂತರದ ಆರಂಭದ ದಿನಗಳು…

ಶ್ರೀಗಳು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂಧರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು. ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿಧ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು. ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು. ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗು ಗಣ್ಯರ ಭೇಟಿ, ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು.

ಆರಂಭದ ದಿನಗಳಲ್ಲಿ ‘ಶ್ರೀಗಳು ಇವನ್ನೆಲ್ಲ ನಿಭಾಯಿಸಲು ಸಾಧ್ಯವಿಲ್ಲ’ ಎಂಬ ಆಡು ನುಡಿಗಳೂ ಕೇಳಿಬಂದಿದ್ದವು. ಇದ್ಯಾವುದಕ್ಕೂ ಧೃತಿಗೆಡದ ಶ್ರೀಗಳು ಪೂಜ್ಯ ಲಿ. ಶ್ರೀ ಅಟವೀ ಸ್ವಾಮಿಗಳ ಹಾಗು ಲಿ. ಶ್ರೀ ಉದ್ಧಾನ ಸ್ವಾಮಿಗಳ ಆಶಯದಂತೆ ಯಾವುದೇ ತೊಡಕುಗಳಾಗದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು, ವಿದ್ಯಾರ್ಥಿ ನಿಲಯಗಳನ್ನು, ಪ್ರಸಾದ ನಿಲಯಗಳನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ. ಅಷ್ಟರಲ್ಲಾಗಲೇ ಸ್ವಾತಂತ್ರ್ಯ ಕಂಡು ಸ್ವಾಯತ್ತತೆಯೆಡೆಗೆ ಅಡಿಯಿಡುತ್ತಿದ್ದ ಭಾರತ ಶಿಕ್ಷಣದ ಮಹತ್ವವನ್ನು ದೇಶದೆಲ್ಲೆಡೆ ಪಸರಿಸಲು ಹಾಗು ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ತಿಳಿಸಲು ಸರ್ಕಾರವೂ ಸೇರಿದಂತೆ ಅನೇಕ ಮಹನೀಯರು ಮೊದಲಾದರು.

ಆದರೆ ಸಿದ್ದಗಂಗೆಯಲ್ಲಿ ಅದಾಗಲೇ ಅವೆಲ್ಲವೂ ಕಾರ್ಯರೂಪಕ್ಕೆ ಬಂದಾಗಿತ್ತು. ಸಾಲದ್ದಕ್ಕೆ ಅಲ್ಲಿ ಕಲಿಯುತ್ತಿದ್ದ ಬಹುಪಾಲು ಎಲ್ಲರೂ ಗ್ರಾಮೀಣ ಮಕ್ಕಳೇ. ಈ ಕಾರ್ಯ ರಾಷ್ಟ್ರ ಮಟ್ಟದಲ್ಲೂ ಬಹಳ ಶ್ಲಾಘನೆಗೆ ಒಳಗಾಗಿ, ಸಿದ್ದಗಂಗೆಯ ಕೀರ್ತಿ ಎಲ್ಲೆಡೆ ಹರಡಲು ಪ್ರಾರಂಭವಾಯಿತು.ಸಿದ್ದಗಂಗೆಯ ಕೀರ್ತಿ ಪಸರಿಸಿದಂತೆ ಅಲ್ಲಿನ ಭಕ್ತ ವರ್ಗವೂ, ವಿಧ್ಯಾರ್ಥಿ ಸಂಕುಲವೂ ಕಾಲಕ್ರಮೇಣ ಹೆಚ್ಚುತ್ತಾ ಹೋಯಿತು. ಇದು ಸ್ವಾಮೀಜಿಯವರ ದೂರದರ್ಶಿತ್ವಕ್ಕೆ ಒಂದು ಉದಾಹರಣೆ.

ಶ್ರೀಗಳ ದಿನಚರಿ ಹೇಗಿರುತ್ತು ಗೊತ್ತಾ…

ಪ್ರತಿದಿನವೂ ಶ್ರೀಗಳು ಬೆಳಗಿನ ನಾಲ್ಕುಗಂಟೆಗೆ ಎದ್ದು ಸ್ನಾನಮಾಡಿ, ಪೂಜಾಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಿದ್ದರು. ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಢ್ರ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಿದ್ದರು. ನಂತರ ಆಹಾರ ಸೇವನೆ, ಮುಂಜಾನೆ ಆರೂವರೆಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ತೊವ್ವೆ, ‘ಸಿಹಿ’ ಹಾಗೂ ‘ಖಾರ ಚಟ್ನಿ’ ಸೇವನೆ. ಎರಡು ತುಂಡು ಸೇಬು. ಇದರ ಬಳಿಕ, ‘ಬೇವಿನ-ಚಕ್ಕೆ ಕಷಾಯ’ ಸೇವನೆ ಮಾಡುತ್ತಿದ್ದರು.

ನಂತರ ಮಠದ ಪ್ರಸಾದ ನಿಲಯದ ಮುಂಭಾಗದ ಮಂಚದ ಮೇಲೆ ಆಸೀನರಾಗುತ್ತಿದ್ದರು. ಭಕ್ತರ ಕಷ್ಟ-ಸುಖಕ್ಕೆ ಸ್ಪಂದನ, ಮಧ್ಯಾನ್ಹ ಮೂರು ಗಂಟೆಯ ವರೆವಿಗೆ ನಿರಂತರವಾಗಿ ಸಾಗುತ್ತದೆ.ಮಠಕ್ಕೆ ಭೇಟಿ ಕೊಡುವ ಬಹುತೇಕ ಭಕ್ತರು ರೈತಾಪಿ ವರ್ಗದವರಾದ್ದರಿಂದ ಶ್ರೀಗಳು ಬೇರೆ ಬೇರೆ ಪ್ರದೇಶದಿಂದ ಬಂದ ರೈತರಲ್ಲಿ ಮಳೆ ಬೆಳೆಗಳ ಬಗ್ಗೆ ಪ್ರಶ್ನಿಸುತ್ತಿದ್ದರು. ಇದರ ಬಳಿಕ ಶ್ರೀಗಳು,ನೇರವಾಗಿ ಮಠಕ್ಕೆ ಸಾಗಿ, ಸ್ನಾನ ಪೂಜೆಗಳಲ್ಲಿ ಮಗ್ನರಾಗುತ್ತಿದ್ದರು. ಇದರ ಬಳಿಕ, ಒಂದು ಎಳ್ಳಿಕಾಯಿ ಗಾತ್ರದಮುದ್ದೆ, ಸ್ವಲ್ಪವೇ ಅನ್ನ, ಮತ್ತು ತೊಗರಿಬೇಳೆ ಸಾಂಬಾರ್ ಊಟಮಾಡುತ್ತಿದ್ದರು. ಸಂಜೆ 4 ಗಂಟೆಯ ನಂತರ ಪುನಃ ಭಕ್ತಗಣದ ಬೇಟಿ ಮಾಡುತ್ತಿದರು. ಮಠದಲ್ಲಿ ಉಳಿದುಕೊಂಡು ವಿದ್ಯಾರ್ಜನೆ ಮಾಡುವ ಮಕ್ಕಳ ಕುಶಲೋಪರಿ, ದಾಸೋಹದ ಮಾಹಿತಿ ಸುಮಾರು ರಾತ್ರಿ 9 ಗಂಟೆಯವರೆವಿಗೂ ನಡೆಯುತ್ತಿತ್ತು.

ಹಳೆಯ ಮಠದಲ್ಲಿ ರಾತ್ರಿಯ ಕಾರ್ಯಕ್ರಮ ನಡೆಯುತ್ತಿತ್ತು…

ನಂತರ ಹಳೆಯ ಮಠದಲ್ಲಿ ರಾತ್ರಿಯ ಕಾರ್ಯಕ್ರಮ. ಸ್ನಾನ, ಪೂಜೆ, ಮತ್ತು, ಪ್ರಸಾದ. ಒಂದು ಚಪಾತಿ ಇಲ್ಲವೇ ಒಂದು ದೋಸೆ. ಅದರ ಜೊತೆಗೆ ಚಟ್ಣಿ ಅಥವಾ ಪಲ್ಯ. ಇದಿಲ್ಲದೇ ಹೋದರೆ, ಉಪ್ಪಿಟ್ಟು, ನಂತರ ಹಣ್ಣಿನ ಸೇವನೆ ಮುಗಿಸಿ ಹತ್ತು ಗಂಟೆಗೆ ಸ್ವಾಮಿಗಳು ಸಭಾಂಗಣದಲ್ಲಿ ಹಾಜರಾಗಿರುತ್ತಿದ್ದರು. ‘ಶ್ರೀ ಜಗಜ್ಯೋತಿ ಬಸವೇಶ್ವರ ನಾಟಕ’ ದ ಒಂದು ದೃಶ್ಯವನ್ನು ನೋಡಿದ ಬಳಿಕ ಅಂದಿನ ದಿನದ ಕಾಯಕಕ್ಕೆ ವಿರಾಮ ಹೇಳುತ್ತಿದ್ದರು ಶ್ರೀಗಳು.

ಓದಿನೊಂದಿಗೆ ಆರಂಭ, ಓದಿನೊಂದಿಗೆ ಮುಕ್ತಾಯ…

ರಾತ್ರಿ ಹತ್ತೂವರೆಗೆ ಸ್ವಾಮೀಜಿ ಮಲಗುವ ವೇಳೆ ಪುಸ್ತಕ ಓದಿ ಮಲಗುವ ಹವ್ಯಾಸವಿಟ್ಟುಕೊಂಡಿದ್ದರು. ಇದು ಕನಿಷ್ಠ ಅರ್ಧತಾಸಾದರೂ ನಡೆಯುತಿತ್ತು. ಹನ್ನೊಂದು ಗಂಟೆಗೆ ಮಲಗುತ್ತಿದ್ದರು. ಓದಿನೊಂದಿಗೆ ಆರಂಭವಾಗುವ ಶ್ರೀಗಳ ದಿನಚರಿ, ಓದಿನೊಂದಿಗೆ ಮುಕ್ತಾಯವಾಗುತಿತ್ತು. ಹಲವು ದಿನಗಳಲ್ಲಿ, ಕೆಲವಾರು ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಆಹ್ವಾನಿಸುವ ಭಕ್ತರ ಮನೆಗಳಿಗೂ ಭೇಟಿನೀಡುತ್ತಿದ್ದರು. ದೂರದ ಊರುಗಳಿಗೂ ಓಡಾಡುತ್ತಿದ್ದರು. ಪ್ರಸಾದ ಸ್ವೀಕರಿಸುವ ವೇಳೆಯಲ್ಲಿ ಮಾತ್ರ ಬಿಸಿನೀರು ಸೇವಿಸುತ್ತಿದ್ದರು.

ಶ್ರೀಗಳ ಕಾಯಕಕ್ಕೆ ಒಲಿದು ಬಂದಿರುವ ಪ್ರಶಸ್ತಿಗಳು ಮತ್ತು ಸನ್ಮಾನಗಳು…

  • ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
  • ಪೂಜ್ಯ ಸ್ವಾಮೀಜಿಯವರ 100 ನೆ ವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ.
  • 2015ರಲ್ಲಿ ಭಾರತ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಮೂಲ:

ಗಣ್ಯರೊಂದಿಗೆ ಶ್ರೀಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.