ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ.
ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.
ಯುವ ಆವೇಗದ ಚೇತನ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಭರಾಟೆ ಕಥೆಯನ್ನ ರೋರಿಂಗ್ ಸ್ಟಾರ್ ಶ್ರೀಮುರಳಿಯವರಿಗೆ ತಕ್ಕಂತೆಯೇ ಬರೆದಿದ್ದರೆ,ಅದಕ್ಕೆ ತಕ್ಕ ದೃಶ್ಯ ರೂಪವನ್ನೂ ನೀಡಿದ್ದಾರೆ. ಅದರ ಖದರ್ ಏನೆಂಬುದು ಈಗಾಗಲೇ ಟೀಸರ್ ಮುಖಾಂತರ ಪ್ರೇಕ್ಷಕರನ್ನು ಮನರಂಜಿಸಿದೆ.
ಇತ್ತೀಚೆಗೆ ಬಿಡುಗಡೆಯಾಗಿದ್ದ ಡೈಲಾಗ್ ಟ್ರೇಲರ್ ಅಂತೂ ಲಕ್ಷ ಲಕ್ಷ ವೀಕ್ಷಣೆ ಪಡೆಯೋದರೊಂದಿಗೆ ಭರಾಟೆ ಕ್ರೇಜ್ ಮತ್ತಷ್ಟು ಹೆಚ್ಚಿಕೊಂಡಿದೆ.ಅಷ್ಟಕ್ಕೂ ಸುಪ್ರೀತ್ ನಿರ್ಮಾಣ ಮಾಡಿರೋ ಈ ಚಿತ್ರ ಪ್ರೇಕ್ಷಕರನ್ನು ಆವರಿಸಿಕೊಂಡು ಸಾಗಿ ಬಂದಿರೋದೇ ಇಂಥಾ ಕ್ರಿಯೇಟಿವಿಟಿಯಿಂದ ಕೂಡಿದ ಕೆಲಸ ಕಾರ್ಯಗಳಿಂದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…