ದೇವರು-ಧರ್ಮ

ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

1446

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ.

ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ ಸ್ಥಳವಾಗಿದೆ. ಹಲವು ಶತಮಾನಗಳ ಹಿಂದೆ ಬೃಗ ಮಹಾಋಷಿಗಳಿಂದ ಈ ಪ್ರದೇಶಕ್ಕೆ ಕೊಲದೇವಿ ಎಂಬ ಹೆಸರು ಬಂದಿದೆ ಎನ್ನಲಾಗುತ್ತಿದೆ.

ಇಲ್ಲಿರುವ ಆಂಜನೇಯ ಹಲ್ಲು ಹಾಗೂ ಕೈಯಲ್ಲಿ ಬ್ರಹ್ಮಾಸ್ತ್ರವನ್ನು ಹೊಂದಿದ್ದಾನೆ. ಗರುಡ ದೇವರ ದರ್ಶನ ಮಾಡಿದರೆ ಅದೃಷ್ಟ ಖುಲಾಯಿಸುತ್ತೆ ಎನ್ನುವುದು ಗರುಡ ಪುರಾಣಗಳಲ್ಲಿ ಕಂಡುಬರುತ್ತದೆ. ಇನ್ನೊಂದೆಡೆ ಮೇಲುಕೋಟೆ ಚಲುವ ನಾರಾಯಣಸ್ವಾಮಿ ಹಾಗೂ ತಿರುಪತಿಯ ದೇವಾಲಯಗಳಿಗೂ ಈ ಗರುಡ ದೇವರಿಗೂ ಸಂಬಂಧವಿದೆ ಎಂಬ ಇತಿಹಾಸವೂ ಇಲ್ಲಿದೆ.

ಪುರಾಣಗಳು ಹೇಳುವಂತೆ ಲಂಕಾಧಿಪತಿ ರಾವಣ ಸೀತಾದೇವಿಯನ್ನು ಅಪಹರಿಸಿಕೊಂಡು ಹೋಗುತ್ತಿರುವಾಗ ಸಂಪಾತಿಯ ಸಹೋದರ ಜಟಾಯು ಪಕ್ಷಿ ಸೀತೆಯನ್ನು ಕಾಪಾಡಲು ಮುಂದಾದಾಗ ರಾವಣ ಜಟಾಯುವಿನ ಎರಡು ರೆಕ್ಕೆಗಳನ್ನು ಕತ್ತರಿಸಿ ಹಾಕುತ್ತಾನೆ. ಆ ಎರಡು ರೆಕ್ಕೆಗಳು ಈ ಭಾಗದಲ್ಲಿ ಬಿದ್ದವು ಎನ್ನುವುದು ಇತಿಹಾಸ. ಹಾಗಾಗಿಯೇ ರಾವಣನಿಂದ ಗರುಡ ಕೊಲ್ಲಲ್ಪಟ್ಟ ಸ್ಥಳ ಇದಾಗಿದ್ದು ಇದಕ್ಕೆ ಕೊಲದೇವಿ ಎಂಬ ಹೆಸರು ಬಂದಿದೆ ಎಂದು ಪುರಾಣಗಳು ಹೇಳುತ್ತವೆ.

ಈ ಗರುಡ ದೇವರನ್ನು ದರ್ಶನ ಮಾಡಿದ್ರೆ ಹಲವು ರೀತಿಯ ದೋಷಗಳು ನಿವಾರಣೆಯಾಗುತ್ತವೆ. ಅಷ್ಟೇ ಅಲ್ಲದೆ ಕಲ್ಯಾಣ ಭಾಗ್ಯ, ಸಂತಾನ ಭಾಗ್ಯ ಸೇರಿದಂತೆ ವೈದ್ಯ ಲೋಕಕ್ಕೆ ಸವಾಲಾದ ಹಲವು ಕಾಯಿಲೆಗಳು ಇಲ್ಲಿ ವಾಸಿಯಾಗಿವೆ. ವಾಮಾಚಾರ, ಮಾಟ-ಮಂತ್ರಗಳ ನಿವಾರಣೆಗೆ ಬಂದ ಭಕ್ತ ಕೋಟಿಯನ್ನು ಗರುಡ ದೇವರು ರಕ್ಷಿಸಿದ್ದಾನೆ. ಪ್ರತಿ ಶನಿವಾರ, ಭಾನುವಾರ ಇಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ಗರುಡ ದೇವರ ದರ್ಶನ ಪಡೆದರೆ ಬೇಡಿದ್ದನ್ನು ನೀಡುತ್ತಾನೆ ಎಂಬ ಪ್ರತೀತಿ ಇಲ್ಲಿದೆ. ಇಲ್ಲಿಗೆ ಬಂದ ಸಾಕಷ್ಟು ಜನರು ಒಳಿತನ್ನು ಕಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ