ವಿಧ್ಯಾಭ್ಯಾಸ

ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆ ..!ತಿಳಿಯಲು ಈ ಲೇಖನ ಓದಿ..

By admin

November 16, 2017

ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.

ಸ್ವತಃ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರೇ ಈ ಮಾಹಿತಿ ನೀಡಿದ್ದಾರೆ. ಇಳಿಮುಖ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಸಾಕಷ್ಟು ಯೋಜನೆ, ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ. ಇಷ್ಟಾಗಿಯೂ ಸರಕಾರಿ ಶಾಲೆಗಳಿಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.

ರಾಜ್ಯದಲ್ಲಿ 2014-15ರಲ್ಲಿ ಒಟ್ಟು ಮಕ್ಕಳ ದಾಖಲಾತಿ 48,64,509 ಇದ್ದರೆ, 2016-17ನೇ ಸಾಲಿಗೆ 46,50,349ಕ್ಕೆ ಇಳಿದಿದೆ ಎಂದು ತಿಳಿಸಿದರು.

ಆರ್ಟಿಇ ರದ್ದುಗೊಳಿಸಿ:-ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ ಜೆಡಿಎಸ್ನ ವೈ.ಎಸ್.ವಿ. ದತ್ತಾ, ರಾಜ್ಯದಲ್ಲಿ ಆರ್ಟಿಇ ನಿಯಮ ಜಾರಿಗೆ ತಂದಿರುವ ಕಾರಣದಿಂದಲೇ ಸರಕಾರಿ ಶಾಲೆಗಳಿಗೆ ದಾಖ ಲಾಗುತ್ತಿರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಆರ್ಟಿಇ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸಾಮಾಜಿಕ ಕಾಳಜಿ ಇಟ್ಟುಕೊಂಡು ಆರ್ಟಿಇ ನಿಯಮ ಜಾರಿಗೊಳಿಸಲಾಗಿದೆ. ಆರ್‌ಇಟಿ ನಿಯಮದಡಿ ಏನಾದರೂ ಲೋಪವಿದ್ದರೆ ಅದನ್ನು ಸರಿಪಡಿಸಲಾಗುವುದೆ ಹೊರತು ರದ್ದುಗೊಳಿಸಲು ಸಾಧ್ಯವಿಲ್ಲ. ಆದರೆ, ಖಾಸಗಿ ಶಾಲೆಗಳ ಹೆಚ್ಚಳ, ಗ್ರಾಮೀಣ ಪ್ರದೇಶಗಳಿಂದ ಹೆತ್ತವರು ನಗರಕ್ಕೆ ವಲಸೆ ಹೋಗುತ್ತಿರುವುದು, ಮಕ್ಕಳ ಜನನ ಪ್ರಮಾಣ ಕಡಿಮೆಯಾಗುವುದು ಮುಂತಾದ ಕಾರಣಗಳಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಪ್ರಮಾಣ ಕಡಿಮೆಯಾಗಲು ಕಾರಣ ಹೊರತು ಆರ್ಟಿಇ ಕಾರಣವಲ್ಲ ಎಂದು ಸಮರ್ಥಿಸಿಕೊಂಡರು.