ಸುದ್ದಿ

‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

31

ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು ಮಾತನಾಡಿಸಿ ಮಾಹಿತಿ ಕಲೆ ಹಾಕಿದರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಂತಹ ಪರಿಸ್ಥಿತಿಗೂ ನಾನು ಬಗ್ಗುವುದಿಲ್ಲ. ಸರ್ಕಾರಿ ವೈದ್ಯರು ಎರಡು ಬೋಟ್‌ಗಳ ಮೇಲೆ ಕಾಲು ಇಡಬಾರದು‌.

ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಎಂಬಿಬಿಎಸ್ ಪದವಿ ಮುಗಿಸಿ ಹೊರ ಬರುತ್ತಿದ್ದು, ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒಂದು ವೇಳೆ ಸರ್ಕಾರಿ ವೈದ್ಯರು ಎರಡೂ ಕಡೆ ಕೆಲಸ ಮಾಡುವುದೇ ಆದ್ರೆ ಮೊದಲು ಇಲ್ಲಿಂದ ತೊಲಗಿ ಎಂದು ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ್ರು.

ಇನ್ನು ವೈದ್ಯರು ಕರ್ತವ್ಯಕ್ಕೆ ಸೇರುವಾಗ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಪ್ರಮಾಣ ಮಾಡಿರುತ್ತೀರ. ಅದರಂತೆ ನೀವು ನಡೆದುಕೊಳ್ಳಬೇಕು. ಎಲ್ಲಾ ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಒಂದು ವೇಳೆ ಇದು ಸಾಧ್ಯವಾಗದಿದ್ರೆ ರಾಜ್ಯಮಟ್ಟದಲ್ಲಿ ಟೆಂಡರ್ ಕರೆದು ಸಿಬ್ಬಂದಿ ನೇಮಿಸುತ್ತೇವೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

    ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…