ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ..
ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..
ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ ದಲ್ಲಿ 7.75 ಕೋಟಿ ಹಣವನ್ನು ಶಿಕ್ಷಣದ ಉದ್ದೇಶಕ್ಕಾಗಿ ಖರ್ಚು ಮಾಡಿರುವುದು ಇವರ ಕೆಲಸಕ್ಕೊಂದು ಕೈಗನ್ನಡಿ ಎನ್ನಬಹುದು..
ಇದೀಗ ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿ ಶಾಲೆಯ ಸೌಲಭ್ಯಗಳ ಕುರಿತು ಸಂವಾದ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.. ಯಾವ ಅಧಿಕಾರಿಗಳಿಗೂ ಕೆಲಸ ವಹಿಸದೆ.. ಸ್ವತಃ ತಾವೇ ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳ ವಿಧ್ಯಾಭ್ಯಾಸದ ಕುರಿತು ವಿಚಾರಿಸಿ.. ಸೌಲಭ್ಯಗಳ ಬಗ್ಗೆ ಮಕ್ಕಳ ಬಳಿಯೇ ಸಂವಾದ ನಡೆಸಿದ್ದಾರೆ..
ಡಾ. ಅಶ್ವತ್ಥ್ ನಾರಾಯಣ್ ರವರು ಮಾಡುತ್ತಿರುವ ಈ ಪ್ರಶಂಸನೀಯ ಕೆಲಸವನ್ನು ಬಯೋಕಾನ್ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಕಿರಣ್ ಮಜುಮ್ದಾರ್ ಶಾ ರವರು ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ..
ಈಗಾಗಲೇ ಅಂತರಾಷ್ಟ್ರೀಯ ಮಟ್ಟದ ಅನೇಕ ಸ್ಟೇಡಿಯಂಗಳು ಮಲ್ಲೇಶ್ವರಂ ನಲ್ಲಿ ತಲೆ ಎತ್ತಿ ನಿಂತಿದೆ.. ಆಗಿಂದಾಗ್ಗೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳು ಕೂಡ ಅಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ..
ಡಾ.ಅಶ್ವತ್ಥ್ ನಾರಾಯಣ್ ರವರಿಗೆ ತಮ್ಮ ಕ್ಷೇತ್ರದ ಅಭಿವೃದ್ಧಿಯ ಮೇಲಿರುವ ಕಾಳಜಿಗೆ ನಮ್ಮ ಕಡೆಯಿಂದ ಧನ್ಯವಾದಗಳು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ