ಸುದ್ದಿ

ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

By admin

October 10, 2019

ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೈತ ಸಂಘಟನೆಗಳ ವತಿಯಿಂದ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಹೃದಯ ಭಾಗಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರೇಸ್ ಕೋರ್ಸ್ ರಸ್ತೆ, ಕೆಜಿ ರಸ್ತೆ, ಕಾರ್ಪೋರೇಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.

ರೈತರ ಪ್ರತಿಭಟನೆ ಮತ್ತು ಜೆಡಿಎಸ್ ಪ್ರತಿಭಟನೆ ನಡೆಯಲಿರುವ ಹಿನ್ನಲೆಯಲ್ಲಿ ಭದ್ರತೆಗಾಗಿ ಸಿಆರ್ಪಿಎಫ್ ತುಕಡಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವಿಧಾನಸೌಧ ಸುತ್ತಮುತ್ತ ಹಾಗೂ ಶೇಷಾದ್ರಿಪುರಂ ಬಳಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.