ಸುದ್ದಿ

ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

39

ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ.

ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ. ದೇಶದಲ್ಲಿ ಬಂಡವಾಳ ಹೂಡಿಕೆದಾರರ ಮನ ಗೆದ್ದು ಆರ್ಥಿಕ ಪ್ರಗತಿ ಸಾಧಿಸಲು ಮುಖ್ಯ ಕಾರಣವಾಗುವುದು ಉದ್ಯಮ ನಡೆಸಲು ಬೇಕಾದ ಪೂರಕ ಸುಲಭ ವಾತಾವರಣ. ಸ್ವಯಂ ದೃಢೀಕರಣ, ವಾರ್ಷಿಕ ಲೈಸೆನ್ಸ್ ನವೀಕರಣದ ಬದಲಿಗೆ 5 ವರ್ಷಗಳ ಲೈಸೆನ್ಸ್ ನವೀಕರಣ ಪರಿಕಲ್ಪನೆ ಉದ್ಯಮಕ್ಕೆ ಸಹಾಯವಾಗಲಿದೆ. ಉದ್ಯಮ ಸರಾಗವಾಗಿ ಮತ್ತು ವೇಗವಾಗಿ ಸಾಗಲು ನೀತಿ ನಿರೂಪಣೆ ಸರಿಯಾಗಿರಬೇಕು ಎಂದು ಕಿರಣ್ ಮಜುಂದಾರ್ ಶಾ ಹೇಳುತ್ತಾರೆ.

ವಿಶ್ವಬ್ಯಾಂಕಿನ ಸುಲಭವಾಗಿ ಉದ್ಯಮ ನಡೆಸುವ ದೇಶಗಳ ಪಟ್ಟಿಯಲ್ಲಿ ಕಳೆದ ವರ್ಷ ಭಾರತಕ್ಕೆ 77ನೇ ಸ್ಥಾನ ಸಿಕ್ಕಿದೆ. ಅಂತಾರಾಷ್ಟ್ರೀಯ ಉದ್ಯಮಗಳ ಆದ್ಯತೆಯ ಟಾಪ್ 10 ರಾಷ್ಟ್ರಗಳಲ್ಲಿ ಭಾರತಕ್ಕೆ ಸ್ಥಾನ ಸಿಗುವತ್ತ ಎನ್ ಡಿಎ ಮೈತ್ರಿಕೂಟ ಕೆಲಸ ಮಾಡಬೇಕಾಗಿದೆ.

ದೇಶದ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ಉದ್ಯೋಗ ಸೃಷ್ಟಿಸಲಿರುವ ಮತ್ತೊಂದು ಯೋಜನೆ ಮೇಕ್ ಇನ್ ಇಂಡಿಯಾ. ಗ್ರೀನ್ಫೀಲ್ಡ್ ಮತ್ತು ಬ್ರೌನ್ಫೀಲ್ಡ್ ತಯಾರಿಕಾ ಯೋಜನೆಗಳಲ್ಲಿ ಹೂಡಿಕೆ ಮಾಡುವ ಅವಶ್ಯಕತೆಯಿದೆ. ವಿಶೇಷ ಆರ್ಥಿಕ ವಲಯಕ್ಕೆ ಒತ್ತು ನೀಡುವ ಅವಶ್ಯಕತೆಯಿದೆ ಎನ್ನುತ್ತಾರೆ ಕಿರಣ್ ಮಜುಂದಾರ್ ಶಾ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ