ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಪಟಾಕಿ ನಿಷೇಧ ಆದೇಶ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಇಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಹಿಂದುಗಳನ್ನು ಗುರಿ ಮಾಡಲಾಗುತ್ತಿದ್ದು, ಹಿಂದೂಗಳ ಹಬ್ಬಗಳನ್ನು ರಡಾರ್ ಗಳನ್ನು ತರುವುದು ಸರಿಯಲ್ಲ ಎಂದು ಬಾಬಾ ರಾಮ್ ದೇವ್ ಪ್ರತಿಕ್ರಯಿಸಿದ್ದಾರೆ..
ಶಿವಸೇನೆ, ಭಾರತದಲ್ಲಿ ಹಿಂದೂ ಹಬ್ಬಗಳ ಉತ್ಸಾಹವನ್ನು ಇದು ಕೊನೆಗಾಣಿಸುತ್ತದೆ ಎಂದು ಆರೋಪಿಸಿದೆ.ವಾಯುಮಾಲಿನ್ಯ ಅಧಿಕವಾಗುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ಮಾರಾಟಕ್ಕೆ ಈ ವರ್ಷ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಆದರೆ ಈ ನಿಷೇಧದಿಂದ ವಾಯು ಮಾಲಿನ್ಯದ ಮೇಲೆ ಯಾವ ರೀತಿ ಮತ್ತು ಎಷ್ಟು ಪರಿಣಾಮ ಬೀರಬಹುದು ಎಂಬುದು ಗೊತ್ತಿಲ್ಲ ಎಂದು ಶಿವ ಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದರ ಮೇಲೆ ಸುಪ್ರೀಂ ಕೋರ್ಟ್ ನಿಷೇಧ ಹೇರಿರುವುದಕ್ಕೆ ಲೇಖಕ ಹಾಗೂ ಕಾದಂಬರಿಕಾರ ಚೇತನ್ ಭಗತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವಾಗಲೂ ಹಿಂದೂ ಹಬ್ಬಗಳ ಮೇಲೆ ಮಾತ್ರ ಇಂತಹ ನಿರ್ಧಾರ ಕೈಗೊಳ್ಳಲಾಗುತ್ತದೆ. ಇತರೆ ಕೋಮುಗಳ ಹಬ್ಬಗಳ ಮೇಲೆ ಯಾರೂ ಚಕಾರ ಎತ್ತುವುದಿಲ್ಲ ಎಂದು ಚೇತನ್ ಪ್ರಶ್ನೆ ಮಾಡಿದ್ದಾರೆ. ಮಕ್ಕಳಿಗೆ ದೀಪಾವಳಿ ಎಂದರೆ ಪಟಾಕಿ ಸಿಡಿಸುವ ಸಂಭ್ರಮ! ಆದರೆ ಪಟಾಕಿನೇ ಇಲ್ಲ ಎಂದ ಮೇಲೆ ಅದು ಹೇಗೆ ದೀಪಾವಳಿ ಹಬ್ಬವಾಗುತ್ತದೆ ಎಂದು ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ.
ಪಟಾಕಿ ಮಾರಾಟವನ್ನು ನಂಬಿಕೊಂಡು ಬದುಕುತ್ತಿರುವ ಪಟಾಕಿ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ ಪಟಾಕಿ ಮಾರಾಟ ನಿಷೇಧ ಪರಿಣಾಮ ಬೀರಿ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಪಟಾಕಿ ಮಾರಾಟ ನಿಷೇಧಿಸುವ ಮುನ್ನ ಅದನ್ನು ನಂಬಿಕೊಂಡು ಬದುಕುತ್ತಿರುವ ಕುಟುಂಬಗಳಿಗೆ ಪರ್ಯಾಯ ಜೀವನೋಪಾಯ ಕಲ್ಪಿಸಲಾಗಿದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…