ಕಾನೂನು

ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

By admin

October 12, 2017

ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ  ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

ಪಟಾಕಿ ನಿಷೇಧ ಆದೇಶ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಇಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಹಿಂದುಗಳನ್ನು ಗುರಿ ಮಾಡಲಾಗುತ್ತಿದ್ದು, ಹಿಂದೂಗಳ ಹಬ್ಬಗಳನ್ನು ರಡಾರ್ ಗಳನ್ನು ತರುವುದು ಸರಿಯಲ್ಲ ಎಂದು ಬಾಬಾ ರಾಮ್ ದೇವ್ ಪ್ರತಿಕ್ರಯಿಸಿದ್ದಾರೆ..

ಶಿವಸೇನೆ, ಭಾರತದಲ್ಲಿ ಹಿಂದೂ ಹಬ್ಬಗಳ ಉತ್ಸಾಹವನ್ನು ಇದು ಕೊನೆಗಾಣಿಸುತ್ತದೆ ಎಂದು ಆರೋಪಿಸಿದೆ.ವಾಯುಮಾಲಿನ್ಯ ಅಧಿಕವಾಗುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ಮಾರಾಟಕ್ಕೆ ಈ ವರ್ಷ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಆದರೆ ಈ ನಿಷೇಧದಿಂದ ವಾಯು ಮಾಲಿನ್ಯದ ಮೇಲೆ ಯಾವ ರೀತಿ ಮತ್ತು ಎಷ್ಟು ಪರಿಣಾಮ ಬೀರಬಹುದು ಎಂಬುದು ಗೊತ್ತಿಲ್ಲ ಎಂದು ಶಿವ ಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದರ ಮೇಲೆ ಸುಪ್ರೀಂ ಕೋರ್ಟ್‌ ನಿಷೇಧ ಹೇರಿರುವುದಕ್ಕೆ  ಲೇಖಕ ಹಾಗೂ ಕಾದಂಬರಿಕಾರ ಚೇತನ್‌ ಭಗತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವಾಗಲೂ ಹಿಂದೂ ಹಬ್ಬಗಳ ಮೇಲೆ ಮಾತ್ರ ಇಂತಹ ನಿರ್ಧಾರ ಕೈಗೊಳ್ಳಲಾಗುತ್ತದೆ. ಇತರೆ ಕೋಮುಗಳ ಹಬ್ಬಗಳ ಮೇಲೆ ಯಾರೂ ಚಕಾರ ಎತ್ತುವುದಿಲ್ಲ ಎಂದು ಚೇತನ್‌ ಪ್ರಶ್ನೆ ಮಾಡಿದ್ದಾರೆ. ಮಕ್ಕಳಿಗೆ ದೀಪಾವಳಿ ಎಂದರೆ ಪಟಾಕಿ ಸಿಡಿಸುವ ಸಂಭ್ರಮ! ಆದರೆ ಪಟಾಕಿನೇ ಇಲ್ಲ ಎಂದ ಮೇಲೆ ಅದು ಹೇಗೆ ದೀಪಾವಳಿ ಹಬ್ಬವಾಗುತ್ತದೆ ಎಂದು ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಪಟಾಕಿ ಮಾರಾಟವನ್ನು ನಂಬಿಕೊಂಡು ಬದುಕುತ್ತಿರುವ ಪಟಾಕಿ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ ಪಟಾಕಿ ಮಾರಾಟ ನಿಷೇಧ ಪರಿಣಾಮ ಬೀರಿ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಪಟಾಕಿ ಮಾರಾಟ ನಿಷೇಧಿಸುವ ಮುನ್ನ ಅದನ್ನು ನಂಬಿಕೊಂಡು ಬದುಕುತ್ತಿರುವ ಕುಟುಂಬಗಳಿಗೆ ಪರ್ಯಾಯ ಜೀವನೋಪಾಯ ಕಲ್ಪಿಸಲಾಗಿದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ.