ರಾಜಕೀಯ

ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

55

ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ.

ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ ಸಾಧ್ಯತೆಯನ್ನು ಅಲ್ಲಗಳೆಯಲಾಗುವುದಿಲ್ಲ. ಆರಂಭದ ಸುತ್ತುಗಳಲ್ಲಿ ಸುಮಲತಾ ಮುನ್ನಡೆ ಪಡೆದರೂ, ಬಳಿಕ ನಿಖಿಲ್ ಮುನ್ನಡೆ ಸಾಧಿಸಿದ್ದರು. ಈ ರೀತಿ ಫಲಿತಾಂಶ ಬದಲಾಗುತ್ತಿರುವುದು ಎರಡೂ ಅಭ್ಯರ್ಥಿಗಳ ಬೆಂಬಲಿಗರನ್ನು ಗೊಂದಲಕ್ಕೆ ದೂಡುತ್ತಿದೆ.

ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ ಸಂದರ್ಭದಲ್ಲಿ ಜೆಡಿಎಸ್ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದರು. ಆದರೆ, ಕೆಲ ಹೊತ್ತಿನಲ್ಲಿಯೇ ಸುಮಲತಾ ಮೇಲುಗೈ ಸಾಧಿಸಿದರು. ದೇಶದ ಗಮನ ಸೆಳೆದಿರುವ ಮಂಡ್ಯ ಕ್ಷೇತ್ರದಲ್ಲಿ ಇಷ್ಟು ನಿಕಟ ಪೈಪೋಟಿ ನಡೆಯುತ್ತಿರುವುದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಗ್ಯಾಜೆಟ್

    ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ.

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…