ಸೌಂದರ್ಯ

ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

74

ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್‍ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್‍ಪ್ಯಾಕ್‍ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್‍ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ:  ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ:  ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್‍ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು:  ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್‍ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್‍ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

    ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…