ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.
ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.
ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.
ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.
ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…