ಸುದ್ದಿ

ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

27

ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ.

ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ ಲೇಖನ ಪ್ರಕಟವಾಗಿದೆ. 2003ರಿಂದ್ಲೇ ಈ ಬಗ್ಗೆ ಸಂಶೋಧನೆ ಆರಂಭವಾಗಿತ್ತು.

ನಿದ್ದೆಯ ಅವಧಿ ಮತ್ತು ಸಮಯ ಎಲ್ಲವನ್ನೂ ಮಾನಿಟರ್ ಮಾಡಲಾಗಿದೆ. ಒಂದಿಡೀ ವಾರದಲ್ಲಿ 3-7 ಬಾರಿ ಹಗಲು ಹೊತ್ತು ನಿದ್ದೆ ಮಾಡಿರುವವರ ಪೈಕಿ ಬಹುತೇಕರು ವೃದ್ಧರು, ಪುರುಷರು, ಧೂಮಪಾನಿಗಳು ಹಾಗೂ ಅತಿಯಾದ ತೂಕ ಹೊಂದಿರುವವರೇ ಆಗಿದ್ದರು.

ಶೇ.58 ಮಂದಿ ಹಗಲು ನಿದ್ದೆ ಮಾಡುತ್ತಿರಲಿಲ್ಲ. 667 ಜನರು ವಾರದಲ್ಲಿ ಒಂದೆರಡು ಬಾರಿ ಹಗಲು ಮಲಗುವ ಅಭ್ಯಾಸ ಇಟ್ಟುಕೊಂಡಿದ್ದರು. 411 ಮಂದಿ 3 ರಿಂದ 5 ಬಾರಿ ಹಗಲಲ್ಲಿ ನಿದ್ದೆ ಹೋಗುತ್ತಿದ್ದರು. ಇವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು, ಹಗಲು ನಿದ್ದೆ ಹೃದಯದ ಆರೋಗ್ಯಕ್ಕೆ ಪೂರಕ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಹಾಗಾಗಿ ನೀವೇನಾದ್ರೂ ಆಯಸ್ಸು ಹೆಚ್ಚಿಸಿಕೊಳ್ಳಬೇಕೆಂದುಕೊಂಡಿದ್ದರೆ ವಾರದಲ್ಲಿ ಒಂದೆರಡು ಬಾರಿ ಹಗಲಲ್ಲಿ ನಿದ್ದೆ ಮಾಡಿ. ಇದರಿಂದ ನಿಮ್ಮ ಮನಸ್ಸು ಕೂಡ ಪ್ರಫುಲ್ಲವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ