ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ.
ಈ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ.
ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾರಿ ವಿರೋಧಿಸಿದ್ದಾರೆ. ಆದ್ದರಿಂದ ಸಂಸ್ಥೆ ಪುನಃ ಕೆಲಸಕ್ಕೆ ಬರುವಂತೆ ಕಿಂಬಲ್‌ಗೆ ಆಫರ್ ನೀಡಿದರೂ ಅದನ್ನು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿರುವ ಆಕೆ, ಹಸಿದ ಬಾಲಕನಿಗೆ ಊಟ ನೀಡಿದ್ದರಲ್ಲಿ ತಪ್ಪೇನಿದೆ? ಮಾನವೀಯತೆ ದೃಷ್ಟಿಯಿಂದ ಈ ರೀತಿ ಮಾಡಿದ್ದೆ. ಆದರೆ ಇದನ್ನು ತಪ್ಪು ಎಂದು ಕೆಲಸದಿಂದ ತೆಗೆದಿದ್ದರು. ಆದರೆ ಒತ್ತಡ ಹೆಚ್ಚಾಗಿರುವುದಕ್ಕೆ ವಾಪಾಸು ಕರೆಯುತ್ತಾರೆ. ಆದ್ದರಿಂದ ನಾನು ಹೋಗುವುದಿಲ್ಲ ಎಂದಿದ್ದಾರೆ.