ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ.
ಹಾಗಲಕಾಯಿಯ ಉಪಯೋಗಗಳು
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ ಕೊಲೆಸ್ಟ್ರಾಲನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚಿಸುತ್ತದೆ : ವೈರಸ ಮತ್ತು ಬ್ಯಾಕ್ಟೀರಿಯಾಗಳ ವಿರುದ್ದ ಹೋರಾಡುವ ಸಾಮಥ್ರ್ಯವನ್ನು ಹೊಂದಿರುವುದರಿಂದ ವಿವಿಧ ಅಲರ್ಜಿಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
ಮಧುಮೇಹವನ್ನು ಕಡಿಮೆ ಮಾಡುತ್ತದೆ : ಪ್ರತಿದಿನ ಹಾಗಲಕಾಯಿ ಸೇವಿಸುವುದರಿಂದ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.
ಮಲಬದ್ಧತೆಯನ್ನು ತಡೆಗಟ್ಟುತ್ತದೆ: ಮಲಬದ್ದತೆಯನ್ನು ತಡೆಗಟ್ಟುವಲ್ಲಿ ಹಾಗಲಕಾಯಿ ನೈಸರ್ಗಿಕ ಪರಿಹಾರವಾಗಿದೆ. ಯಾವದೇ ಅಡ್ಡ ಪರಿಣಾಮಗಳಿಲ್ಲ.
ಚರ್ಮ ಮತ್ತು ಕೂದಲಿನ ಕಾಂತಿಗಾಗಿ: ಚರ್ಮದ ಮೇಲಿನ ಮಯಸ್ಸಾದ ಚಿಹ್ನೆಗಳನ್ನು ಕಡಿಮೆ ಮಾಡುವಲ್ಲಿ ಆಂಟಿ ಆಕ್ಸಿಡೆಂಟಗಳು ಮತ್ತು ವಿಟಮಿನ್ ಸಿ ಮತ್ತು ಎ ಸಹಾಯ ಮಾಡುತ್ತದೆ. ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.
ತೂಕ ಕಡಿಮೆ ಮಾಡುತ್ತದೆ ಕ್ಯಾಲೋರಿ, ಕೊಬ್ಬು ಮತ್ತು ಕಾರ್ಬೋಹೈಡ್ರೇಟಗಳು ಕಡಿಮೆ ಇರುವುದರಿಂದ ತೂಕ ಇಳಿಸುವಲ್ಲಿ ಆಹಾರದಲ್ಲಿ ಸೇರಿಸಲಾಗುತ್ತದೆ.
ಕಣ್ಣಿನ ದೃಷ್ಟಿ ಹೆಚ್ಚಿಸುತ್ತದೆ: ಇದರಲ್ಲಿನ ಬೀಟಾ ಕ್ಯಾರೋಟಿನ್ ಮತ್ತು ಜೀವಸತ್ವ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅವಶ್ಯಕವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡುತ್ತದೆ. ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.
ರಕ್ತವನ್ನು ಶುದ್ಧಿಕರಿಸುತ್ತದೆ ಪ್ರತಿದಿನ ಬೆಳೆಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸ ಸೇವಿಸುವುದರಿಂದ ರಕ್ತ ಶುದ್ಧಿಗೊಳ್ಳುತ್ತದೆ.
ಕ್ಯಾನ್ಸರ್ನಿಂದ ಕಾಪಾಡುತ್ತದೆ
ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.