ಸುದ್ದಿ

ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

By admin

November 18, 2019

ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ.

ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ.

ಕೋಲಾರದಲ್ಲಿ ಈ ಪ್ರಕರಣ ನಡೆದಿದ್ದು, ಟ್ಯೂಬರ್ಗ್ ಬಿಯರ್‍ಗೆ ಕಲಬೆರಕೆ ಮಾಡಲಾಗಿದೆ. ಇದನ್ನು ಕಂಡ ಗ್ರಾಹಕರು ಗಾಬರಿಯಾಗಿದ್ದು, ಮಾಲೀಕರ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಕುರಿತು ತನಿಖೆ ನಡೆಸಿ ಬಾರ್ ಅಥವಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಅಬಕಾರಿ ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಘಟನೆ ನಂತರ ಅಬಕಾರಿ ಸಬ್ ಇನ್ಸ್‍ಪೆಕ್ಟರ್ ನಾರಾಯಣಸ್ವಾಮಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಗ್ರಾಹಕರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಪ್ರಾರಂಭಿಸಿದ್ದಾರೆ.