ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ.
ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಇಡೀ ಭಾರತದಾದ್ಯಂತ ಈ ಹಬ್ಬವನ್ನು ಶ್ರದ್ಧಾ ಮತ್ತು ಭಕ್ತಿಗಳ ಜೊತೆಯಲ್ಲಿ ಆಚರಿಸಲಾಗುತ್ತದೆ.
ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ.
ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇದ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ. ಹಿಂದೂಗಳು ನಾಗರ ಪಂಚಮಿಯನ್ನು ಏಕೆ ಆಚರಿಸುತ್ತಾರೆ ಮತ್ತು ಅದರ ಹಿಂದಿನ ಕಾರಣಗಳೇನು?
ಈ ಹಬ್ಬವನ್ನು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣ ಕೂಡ ಇದೆ. ಈ ಸಮಯದಲ್ಲಿ ಹಾವುಗಳು ಜನರಿಗೆ ಭಯಭೀತಿಯನ್ನುಂಟು ಮಾಡಿರುತ್ತವೆ. ಮಳೆಯ ಕಾರಣದಿಂದ ಬಿಲಗಳಲ್ಲಿ ನೀರು ತುಂಬಿಕೊಂಡಾಗ ಹೊರ ಬರುವ ಹಾವುಗಳು ಜನರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಹಾವುಗಳಿಗೆ ಹಾಲೆರೆದು ಪೂಜಿಸಲಾಗುತ್ತದೆ.
ನಾಗರ ಪಂಚಮಿಯ ಆಚರಣೆಯ ಹಿಂದಿನ ಕಾರಣ
ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ.
ನಾಗರಪಂಚಮಿಗೂ ಭಗವಾನ್ ಶ್ರೀ ಕೃಷ್ಣನಿಗೂ ಇದೆ ಸಂಭಂದ
ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಕೃಷ್ಣನು ಯಮುನಾ ನದಿಯ ತೀರದಲ್ಲಿ ಆಡುತ್ತಿದ್ದನು. ಆಗ ಅವನು ಆಟವಾಡುತ್ತಿದ್ದ ವಸ್ತು ನದಿ ದಂಡೆಯಲ್ಲಿದ್ದ ಮರದ ಕಾಂಡದಲ್ಲಿ ಸಿಕ್ಕಿ ಹಾಕಿಕೊಂಡಿತು. ಆ ಚೆಂಡನ್ನು ಎತ್ತಿಕೊಳ್ಳಲು ಹೋದಾಗ ಕೃಷ್ಣನು ಜಾರಿ ನದಿಯಲ್ಲಿ ಬಿದ್ದನು.
ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಕೃಷ್ಣನ ಮೇಲೆ ಆಕ್ರಮಣ ಮಾಡುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ.
ಸ್ವಲ್ಪ ಸಮಯದ ನಂತರ ಆ ಹಾವಿಗೆ ಕೃಷ್ಣನು ಸಾಮಾನ್ಯ ಬಾಲಕನಲ್ಲ ಎಂದು ಅರಿವಾಗುತ್ತದೆ. ಆಗ ಆ ಹಾವು ಕೃಷ್ಣನನ್ನು ತನ್ನನ್ನು ಕೊಲ್ಲಬೇಡವೆಂದು ಅಂಗಲಾಚುತ್ತದೆ. ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಸರ್ಪವನ್ನು ಗೆದ್ದ ಸಂತೋಷವನ್ನು ನೆನಪಿಸಿಕೊಳ್ಳುವ ಸಲುವಾಗಿ ನಾಗರ ಪಂಚಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ನಮ್ಮ ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಹೇಗೆ ಆಚರಿಸುತ್ತಾರೆ?
ಹಿಂದೂಗಳು ನಾಗ ಪಂಚಮಿಯಂದು ಚಂದನ ಅಥವಾ ಅರಿಶಿಣದಿಂದ ಮಣೆ ಮೇಲೆ ನವನಾಗಗಳ ಆಕೃತಿ ಬರೆದು ಪೂಜೆ ಮಾಡುವ ಪದ್ಧತಿ ಇದೆ. ಇಲ್ಲವೆಂದರೆ ನಾಗರ ಕಲ್ಲುಗಳಿಗೆ ಸಹ ಪೂಜೆ ಮಾಡುತ್ತಾರೆ. ಈ ದಿನ, ನಾಗದೇವನಿಗೆ ಅರಳು ಮತ್ತು ಹಾಲನ್ನು ನೈವೇದ್ಯವೆಂದು ಅರ್ಪಿಸಬೇಕು.
ಹಿಂದೂ ನಂಬಿಕೆಗಳ ಪ್ರಕಾರ ,ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಈ ಹಬ್ಬವನ್ನು ಕರ್ನಾಟಕ ಸೇರಿದಂತೆ ಭಾರತದ ಎಲ್ಲಾ ಭಾಗಗಳಲ್ಲಿ ಆಚರಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …