ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.
ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.
ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.
೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.
ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…