ಗ್ಯಾಜೆಟ್

ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

1688

ಈಗಾಗಲೇ ಭಾರತ ಚೀನಾ ಮಧ್ಯದ ಸಂಬಂದ ಹಳಸಿದ್ದು ಯುದ್ದದ ಸನ್ನಿವೇಶ ಉತ್ಪನ್ನವಾಗಿದೆ. ಇದರ ನಡುವೆ ಚೀನಾದ ಮೊಬೈಲ್’ಗಳಿಂದ ಅಪಾಯ ಇದೆ ಎಂಬ ಸೂಚನೆ ಸಿಕ್ಕಿದೆ.

ಹಾಗಾಗಿ ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು  ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ  ವಿವರಣೆ ಕೇಳಿದೆ.

ಚೀನಾ ಮೋಬೈಲ್`ಗಳಿಂದ ಭಾರತಕ್ಕೆ ಅಪಾಯ

ಯುದ್ದದ ಸನ್ನಿವೇಶ ಏರ್ಪಟ್ಟಿರುವುದರಿಂದ ಚೀನಾದ ಮೊಬೈಲ್’ಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ, ಈ ಮೊಬೈಲ್’ಗಳು ಭಾರತೀಯರ ವೈಯಕ್ತಿಕ ಮಾಹಿತಿ ಮತ್ತು ಸಂದೇಶಗಳನ್ನ ಕದಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.

ಇದರ ಬೆನ್ನಲ್ಲೇ ಚೀನಾ ಮೋಬೈಲ್`ಗಳಿಂದ ಭಾರತಕ್ಕೆ ಅಪಾಯದ ಸೂಚನೆ ಸಿಕ್ಕಿದೆ. ಹೀಗಾಗಿ, ಚೀನಾ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ನೋಟಿಸ್ ಕೊಟ್ಟಿದೆ.

ಈ ಕಂಪನಿಗಳಿಗೆ ಆಗಸ್ಟ್ 28ರವರೆಗೆ ಕೇಂದ್ರ ಸರ್ಕಾರ ಕಾಲಾವಕಾಶ ನೀಡಲಾಗಿದ್ದು, ಅಷ್ಟರೊಳಗೆ ಭದ್ರತಾ ನಿಯಮಗಳ ಅನುಸರಣೆಯ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ.

ಒಂದು ವೇಳೆ ಭದ್ರತಾ ನಿಯಮಗಳು ಉಲ್ಲಂಘನೆಯಾಗಿದ್ದಲ್ಲಿ  ಅಂತಹ ಕಂಪನಿಗಳಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದರ ಜೊತೆಗೆ ಕೇಂದ್ರ ಸರ್ಕಾರ, ಚೀನಾದಿಂದ ಆಮದಾಗುವ ಅಪಾರ ಪ್ರಮಾಣದ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನ ಪರಿಶೀಲನೆಗೆ ಒಳಪಡಿಸುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ವ್ಯಕ್ತಿ ವಿಶೇಷಣ

    ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

    ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಉಪಯುಕ್ತ ಮಾಹಿತಿ

    ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

    ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…