News

Why Technical SEO Still Matters for Growing Websites
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

126
Heart attack

ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.

ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು. 

ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

Heart problems

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!

ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್‌ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ. 

ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!

ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್‌ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಹೃದಯಾಘಾತ

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್‌ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್‌ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ. 
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ. 

Published by

Mayoon N / Biotechnologist / Director of DRM Career Build Center, Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

    ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ಆರೋಗ್ಯ, ತಂತ್ರಜ್ಞಾನ

    ಜಗತ್ತಿನಲ್ಲೇ ಮೊದಲ ಬಾರಿ ‘ಡಿಜಿಟಲ್ ಮಾತ್ರೆ’ ನೀಡಲು ಮುಂದಾದ ದೇಶ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…