ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ.
ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ.
ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ.
ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.
ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…